News Karnataka Kannada
Monday, April 22 2024
Cricket
ವಿದೇಶ

ಸೋನಿಯಾ ಗಾಂಧಿಗೆ ಹೆರಿಗೆ ಮಾಡಿಸಿದ್ದ ಸ್ತ್ರೀರೋಗ ತಜ್ಞೆ ಡಾ.ಎಸ್‌.ಕೆ. ಭಂಡಾರಿ ನಿಧನ

Photo Credit :

ಸೋನಿಯಾ ಗಾಂಧಿಗೆ ಹೆರಿಗೆ ಮಾಡಿಸಿದ್ದ ಸ್ತ್ರೀರೋಗ ತಜ್ಞೆ ಡಾ.ಎಸ್‌.ಕೆ. ಭಂಡಾರಿ   ನಿಧನ

ನವದೆಹಲಿ, : ಸೋನಿಯಾ ಗಾಂಧಿಗೆ ಹೆರಿಗೆ ಮಾಡಿಸಿದ್ದ ಸ್ತ್ರೀರೋಗ ತಜ್ಞೆ ಡಾ.ಎಸ್‌.ಕೆ. ಭಂಡಾರಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ಪ್ರಸಿದ್ಧ ಸ್ತ್ರೀರೋಗ ತಜ್ಞೆ ಡಾ.ಎಸ್. ಕೆ ಭಂಡಾರಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಡಾ ಭಂಡಾರಿ ಅವರು ಕೋವಿಡ್ 19 ಎರಡು ಲಸಿಕೆ ತೆಗೆದುಕೊಂಡಿದ್ದರು ಎಂದು ಅವರು ತಿಳಿಸಿದ್ದಾರೆ.
ಅವರ ಪತಿ ನಿವೃತ್ತ ಐಎಎಸ್ ಅಧಿಕಾರಿ ಕೂಡ ಕೋವಿಡ್ ಪಾಸಿಟಿವ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಇನ್ನೂ ಪತ್ನಿಯ ಸಾವಿನ ಸುದ್ದಿ ತಿಳಿಸಿಲ್ಲ ಎಂದು ಹೇಳಿದ್ದಾರೆ. ಡಾ. ಭಂಡಾರಿ ನಿಧನಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಸಂತಾಪ ಸೂಚಿಸಿದ್ದಾರೆ. 86 ವರ್ಷದ ಡಾ. ಭಂಡಾರಿ ಕಾಂಗ್ರೆಸ್ ನಾಯಕರುಗಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹುಟ್ಟಿನ ಸಂದರ್ಭದಲ್ಲಿ ಸೋನಿಯಾ ಗಾಂಧಿಗೆ ಚಿಕಿತ್ಸೆ ನೀಡಿದ್ದರು.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಭಂಡಾರಿ ಎರಡು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೊರೊನಾ ಪಾಸಿಟಿವ್ ಕೂಡ ಬಂದಿತ್ತು ಎಂದು ಸರ್ ಗಂಗಾ ರಾಮ್ ಆಸ್ಪತ್ರೆ ಅಧ್ಯಕ್ಷ ಡಾ.ಡಿಎಸ್ ರಾಣಾ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು