News Karnataka Kannada
Monday, April 22 2024
Cricket
ವಿದೇಶ

ಹೆದ್ದಾರಿಯಲ್ಲಿ ಚಾಲಕರನ್ನು ಬೆದರಿಸಿ ಹಣ ದರೋಡೆ ; ಇಬ್ಬರ ಬಂಧನ

Photo Credit :

ಹೆದ್ದಾರಿಯಲ್ಲಿ ಚಾಲಕರನ್ನು ಬೆದರಿಸಿ ಹಣ ದರೋಡೆ ; ಇಬ್ಬರ  ಬಂಧನ

ಹುಬ್ಬಳ್ಳಿ: ಜಿಲ್ಲೆಯ ಹೊರವಲಯದ ಗದಗ ರಿಂಗ್ ರೋಡ್‍ನಲ್ಲಿ ಎರಡು ಟಾಟಾ ಏಸ್ ವಾಹನಗಳ ಚಾಲಕರನ್ನು ಬೆದರಿಸಿ, ದರೋಡೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಹುಬ್ಬಳ್ಳಿಯ ಗಂಗಾಧರ ನಗರದ ವಿಶಾಲ್ ಕಾಶಿನಾಥ ಬಿಜವಾಡ ಹಾಗೂ ಕರ್ಣ ಮುಂಡಗೋಡ ಎಂದು ಗುರುತಿಸಲಾಗಿದೆ. ಪಲ್ಸರ್ ಬೈಕಿನಲ್ಲಿ ನಿನ್ನೆ ಈ ಇಬ್ಬರು ಆರೋಪಿಗಳು ರಿಂಗ್ ರೋಡ್‍ನಲ್ಲಿ ಹೋಗುತ್ತಿದ್ದ ಕೃಷ್ಣಾ ಹಾಗೂ ಫಾರೂಕ್ ಎಂಬುವವರ ಟಾಟಾ ಏಸ್ ವಾಹನವನ್ನು ನಿಲ್ಲಿಸಿ, 38 ಸಾವಿರ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದರು. ಘಟನೆಯ ಬಳಿಕ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಂಡಿಗೇರಿ ಠಾಣೆಯ ಪೊಲೀಸರು ಐಟಿಸಿ ಗೋಡೌನ್ ಬಳಿಯಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯವನ್ನು ಪರಿಗಣಿಸಿ ಆರೋಪಿಗಳ ಜಾಡು ಹಿಡಿದಿದ್ದಾರೆ. ಹಳಿಯಾಳ ರಸ್ತೆಯಲ್ಲಿ ಪಾರ್ಟಿ ಮಾಡುತ್ತ ಕುಳಿತ ಸಮಯದಲ್ಲಿ ಪೊಲೀಸರು ಆರೋಪಿಗಳನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು