News Karnataka Kannada
Wednesday, April 17 2024
Cricket
ವಿದೇಶ

ಹೊರಗಡೆ ಬಂದರೇ ಎಫ್‍ಐಆರ್: ಎಸ್ಪಿ ಸೈದುಲು ಅಡಾವತ್ ಎಚ್ಚರಿಕೆ

Photo Credit :

ಹೊರಗಡೆ ಬಂದರೇ ಎಫ್‍ಐಆರ್: ಎಸ್ಪಿ ಸೈದುಲು ಅಡಾವತ್ ಎಚ್ಚರಿಕೆ

ಬಳ್ಳಾರಿ: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಸಂಪೂರ್ಣ ಜನಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶಿಸಿದ್ದು, ಇದಕ್ಕೆ ಜನರು ಸಹಕರಿಸಬೇಕು;ಅನಗತ್ಯವಾಗಿ ಹೊರಗಡೆ ಜನರು ಕಂಡುಬಂದಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿಸುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಎಚ್ಚರಿಸಿದ್ದಾರೆ.

 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲಾಕ್ ಡೌನ್ ಆದಾಗಿನಿಂದ ಬಳ್ಳಾರಿ ಜಿಲ್ಲಾ ಪೊಲೀಸ್ ನಿತ್ಯ 600 ವಾಹನಗಳನ್ನು ಸೀಜ್ ಮಾಡುತ್ತಿದ್ದಾರೆ. ಕಳೆದ 10 ದಿನಗಳಲ್ಲಿ 320 ಜನರ ಮೇಲೆ ಎಫ್‍ಐಆರ್ ದಾಖಲಿಸಲಾಗಿದ್ದು,ಇದರಲ್ಲಿ ಶೇ.70ರಷ್ಟು ಜನರನ್ನು ಜೈಲಿಗೆ ಕಳುಹಿಸಲಾಗಿದೆ ಎಂದರು.

 

ಜನರು ಅನಗತ್ಯವಾಗಿ ಹೊರಡಗಡೆ ಬರದೇ ಜಿಲ್ಲಾಡಳಿತದೊಂದಿಗೆ ಸಹಕರಿಸುವ ಮೂಲಕ ಕೋವಿಡ್ ಮಹಾಮಾರಿ ನಿಯಂತ್ರಿಸಲು ಕೈಜೋಡಿಸಬೇಕು ಎಂದು ಮನವಿ ಮಾಡಿರುವ ಎಸ್ಪಿ ಸೈದುಲು ಅಡಾವತ್ ಅವರು ನಿಯಮಗಳನ್ನು ಉಲ್ಲಂಘಿಸಿ ಹೊರಬಂದಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು