ವಿದೇಶ

ಅಧಿಕಾರ ಹಿಡಿದ ಐದೇ ದಿನದಲ್ಲಿ ತನ್ನ ಕರಾಳ ಮುಖ ತೋರಿಸಲಾರಂಭಿಸಿರುವ ತಾಲಿಬಾನ್‌

ಕಾಬೂಲ್, ;ಆಫ್ಘಾನಿಸ್ತಾನದಲ್ಲಿ ಅಧಿಕಾರ ಹಿಡಿದ ಐದನೇ ದಿನದಲ್ಲಿ ತನ್ನ ವರಸೆ ಬದಲಾಯಿಸಿರುವ ತಾಲಿಬಾನ್, ತನ್ನ ವಿರೋಧಿಗಳ ಪ್ರತೀಕಾರಕ್ಕೆ ಹೆಜ್ಜೆಯನ್ನಿಟ್ಟಿದ್ದು, ಮಹಿಳೆಯರ ಮೇಲೂ ಹಲವು ನಿರ್ಬಂಧಗಳನ್ನು ಹೇರಿದ್ದು, ಭಯಭೀತಿಗೆ ಒಳಗಾಗಿರುವ ಜನ ಪ್ರಾಣ ರಕ್ಷಿಸಿಕೊಳ್ಳಲು ಹೆಣಗಾಡುವಂತಾಗಿದೆ.
ವಿರೋಧಿಗಳ ವಿರುದ್ಧ ಪ್ರತೀಕಾರಕ್ಕೆ ಮುಂದಾಗುವುದಿಲ್ಲ ಎನ್ನುತ್ತಲೇ ತಮ್ಮ ವಿರುದ್ಧ ಅಮೆರಿಕ ಮತ್ತು ನ್ಯಾಟೋ ಪಡೆಗಳ ಜೊತೆ ಕೆಲಸ ಮಾಡಿದ್ದ ಜನರ ಹಾಗೂ ಭಾರತದ ರಾಯಭಾರಿ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತೀಯರ ಹುಡುಕಾಟವನ್ನು ತಾಲಿಬಾನ್ ತೀವ್ರಗೊಳಿಸುತ್ತಿದೆ ಎಂದು ವಿಶ್ವಸಂಸ್ಥೆಯ ಗೌಪ್ಯ ದಾಖಲೆ ಬಹಿರಂಗಗೊಳಿಸಿದೆ.ಕೆಲ ದಾಖಲೆ ಪ್ರಕಾರ, ಆಫ್ಘಾನ್ ಮಿಲಿಟರಿ, ಪೊಲೀಸ್ ಮತ್ತು ಗುಪ್ತಚರ ಘಟಕಗಳ ಕೇಂದ್ರಸ್ಥಾನದಲ್ಲಿ ಕೆಲಸ ಮಾಡಿದವರು ಹೆಚ್ಚಿನ ಅಪಾಯದಲ್ಲಿದ್ದಾರೆ ಎಂದು ತಿಳಿದುಬಂದಿದೆ. ತಾಲಿಬಾನ್ ಉಗ್ರರು ತಾವು ಬಂಧಿಸಲು ಬಯಸುವ ವ್ಯಕ್ತಿಗಳು ಮತ್ತು ಅವರ ಕುಟುಂಬ ಸದಸ್ಯರ ಮನೆ-ಮನೆಗೆ ಭೇಟಿ ನೀಡುತ್ತಿದ್ದಾರೆ.ಜತೆಗೆ ಕಾಬೂಲ್ ವಿಮಾನ ನಿಲ್ದಾಣದ ದಾರಿಯಲ್ಲಿ ಉಗ್ರರು ವ್ಯಕ್ತಿಗಳನ್ನು ಪರೀಕ್ಷಿಸುತ್ತಿದ್ದಾರೆ.ರಾಜಧಾನಿ ಕಾಬೂಲ್ ಮತ್ತು ಜಲಾಲಾಬಾದ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದಾರೆ ಎಂದೂ ಗುಪ್ತಚರ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮಾಹಿತಿ ನೀಡಲು ನಿರಾಕರಿಸುವ ಕುಟುಂಬಗಳನ್ನು ಶರಿಯಾ ಕಾನೂನಿನ ಪ್ರಕಾರ ವಿಚಾರಣೆಗೆ ಒಳಪಡಿಸುತ್ತಾರೆ ಮತ್ತು ಶಿಕ್ಷಿಸುತ್ತಿದ್ದಾರೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಕ್ರಿಶ್ಚಿಯನ್ ನೆಲ್ಲೆಮನ್ ಎಎಫ್‌ಪಿಗೆ ತಿಳಿಸಿದರು. ಆಫ್ಘಾನ್‌ನಲ್ಲಿ ಆಂತರಿಕ ಸಂಘರ್ಷ ಸೃಷ್ಟಿಯಾಗಿದ್ದು, ನಗರದಾದ್ಯಂತ ಇದ್ದ ಮಹಿಳೆಯರ ಸೌಂದರ್ಯವರ್ಧಕಕ್ಕೆ ಸಂಬಂಧಿಸಿದ ಜಾಹೀರಾತುಗಳನ್ನು ತೆರವುಗೊಳಿಸುವ ಕಾರ್ಯ ಶುರುವಾಗಿದೆ.ಕಟ್ಟಾ ಸಂಪ್ರದಾಯವಾದಿಗಳಾದ ತಾಲಿಬಾನಿಗಳ ಆಡಳಿತದಲ್ಲಿ ಇಂಥ ಪೋಸ್ಟರ್‌ಗಳಿಗೆ, ಅವಕಾಶವಿರುವುದಿಲ್ಲ. ಹಾಗಾಗಿ, ಅಂಥ ಪೋಸ್ಟರ್‌ಗಳ ಮೇಲೆ ಬಿಳಿಸುಣ್ಣ ಬಳಿಯುವ ಮೂಲಕ ಅವುಗಳನ್ನು ಮರೆಮಾಚಲಾಗುತ್ತಿದೆ.
ಇನ್ನೂ ಕೆಲವಡೆ ಆ ಮಹಿಳೆಯರ ಭಾವಚಿತ್ರಗಳಿರುವ ಜಾಹೀರಾತು ಫಲಕಗಳನ್ನು ಧ್ವಂಸ ಮಾಡಲಾಗುತ್ತಿದೆ. ತಾಲಿಬಾನ್‌ನ ನಾಯಕ ಹಿಬತುಲ್ಲಾ ಅಖುಂಡಜಾದ, ಅಫ್ಘಾನಿಸ್ತಾನದ ಎಲ್ಲಾ ಜೈಲುಗಳಿಂದ ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ ಎಂದು ಸಂಘಟನೆಯ ವಕ್ತಾರರು ತಿಳಿಸಿದ್ದಾರೆ.

Indresh KC

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

8 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

37 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

53 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago