News Karnataka Kannada
Sunday, May 05 2024
ವಿದೇಶ

ಅಪ್ಘಾನಿಸ್ಥಾನದಲ್ಲಿ ಭೂಕಂಪ ; ಜನರಿಗೆ ಆತಂಕ

Afghan 08082021
Photo Credit :

ಕಾಬುಲ್​: ತಾಲಿಬಾನ್ ದಾಳಿಯಿಂದ ತತ್ತರಿಸಿರುವ ಅಪ್ಘಾನಿಸ್ತಾನಕ್ಕೆ ಗಾಯದ ಮೇಲೆ ಬರೆ ಎನ್ನುವಂತೆ ಮತ್ತೊಂದು ಆಘಾತ ಉಂಟಾಗಿದೆ. ಅದೇನೆಂದರೆ ಅಪ್ಘಾನಿಸ್ತಾನದಲ್ಲಿ ಇಂದು ಮುಂಜಾನೆ ಭೂಮಿ ಕಂಪಿಸಿದೆ. ಉಗ್ರರ ಹಿಡಿತಕ್ಕೆ ಸಿಲುಕಿದಾಗಲೇ ನಿನ್ನೆ ಆಫ್ಘಾನಿಸ್ತಾನದ ಸೇನಾ ವಿಮಾನ ಪತನವಾಗಿತ್ತು. ಇಂದು ಬೆಳಗಿನ ಜಾವ ಆಫ್ಘಾನಿಸ್ತಾನದ ಫೈಜಾಬಾದ್ ಆಗ್ನೇಯ ಪ್ರದೇಶದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ.
ಬೆಳಗ್ಗೆ 6.08ಕ್ಕೆ ಭೂಮಿ ಕಂಪಿಸಿದ್ದು, ಜನರು ಭಯಭೀತರಾಗಿದ್ದಾರೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮೊಲಾಜಿ ವರದಿ ತಿಳಿಸಿದೆ. ಇದಕ್ಕೂ ಮೊದಲು ಅಂದರೆ ಆಗಸ್ಟ್ 15 ರಂದೇ ಆಫ್ಘಾನಿಸ್ತಾನ ಮತ್ತು ಕಜಕಿಸ್ತಾನ ಭಾಗದಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಹೀಗೆ ಪದೇ ಪದೇ ಭೂಕಂಪನ ಉಂಟಾಗುತ್ತಿರುವುದರಿಂದ ಜನ ಜೀವನ ಅಲ್ಲೋಲಕಲ್ಲೋಲವಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು