ನವದೆಹಲಿ : ತಾಲಿಬಾನ್ ಆಕ್ರಮಿತ ಅಫ್ಘಾನಿಸ್ತಾನನಿಂದ ಭಾರತಕ್ಕೆ ಬಂದವರ ಪೈಕಿ ಕನಿಷ್ಟ 10 ಮಂದಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಸೋಮವಾರ ಮತ್ತು ಮಂಗಳವಾರ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಬಂದಿಳಿದಿದ್ದ ಆಫ್ಘನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿತ್ತು.
81 ಮಂದಿ ಆಫ್ಘನ್ ನಾಗರಿಕರು ಎರಡು ದಿನಗಳ ಅವಧಿಯಲ್ಲಿ ಭಾರತಕ್ಕೆ ಬಂದಿಳಿದಿದ್ದರು ಎಂದು ಐಟಿಬಿಪಿ ಗಡಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸೋಂಕು ಪತ್ತೆಯಾಗಿರುವ ಆಫ್ಗನ್ ನಾಗರಿಕರನ್ನು ದಕ್ಷಿಣ ದೆಹಲಿಯ ಕ್ವಾರಂಟೈನ್ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿರುವ ಅಧಿಸೂಚನೆ ಪ್ರಕಾರ ಅಫ್ಘಾನಿಸ್ತಾನದಿಂದ ಬರುವ ಎಲ್ಲರೂ ಕಡ್ಡಾಯವಾಗಿ ೧೪ ದಿನಗಳ ಕಾಲ ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ. ಸೋಂಕು ಪತ್ತೆ ಪರೀಕ್ಷೆಯಲ್ಲಿ ಪಾಸಿಟಿವ್ ಬಂದವರನ್ನು ಕೊರೊನಾ ಶುಸ್ರೂಷಾ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಇದೇ ವೇಳೆ ಅಫ್ಘಾನಿಸ್ತಾನದಿಂದ ಬಂದಿದ್ದ ಇಬ್ಬರು ಭಾರತೀರಿಗೆ ಸೋಂಕು ತಗುಲಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. |
|
ಅಫ್ಘಾನಿಸ್ತಾನನಿಂದ ಭಾರತಕ್ಕೆ ಬಂದವರ ಪೈಕಿ 10 ಜನರಿಗೆ ಕರೋನಾ ಪಾಸಿಟಿವ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.