Categories: ವಿದೇಶ

ಅಫ್ಘಾನಿಸ್ತಾನ ಬಿಕ್ಕಟ್ಟು,ವಿಶೇಷ ತಂಡ ರಚನೆ

ನವದೆಹಲಿ : ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ರಾಜಕೀಯ ಹಾಗೂ ಸಾಮಾಜಿಕ ಬೆಳವಣಿಗೆಯ ಕುರಿತು ಉನ್ನತ ಮಟ್ಟದ ತಂಡವನ್ನು ರಚಿಸಲಾಗಿದೆ.
ಈ ತಂಡ ಭಾರತದ ವಿದೇಶಾಂಗ ಸಚಿವ ಜೈ ಶಂಕರ್, ವಿದೇಶಾಂಗ ಸಲಹೆಗಾರ ಅಜೀತ್ ಧೂವೆಲ್ ರನ್ನು ಒಳಗೊಂಡಿದೆ.
ಈ ಗುಂಪು ಕಳೆದ ಕೆಲವು ದಿನಗಳಿಂದ ನಿಯಮಿತವಾಗಿ ಸಭೆ ನಡೆಸುತ್ತಿದೆ. “ಅಫ್ಘಾನಿಸ್ತಾನದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಹಿಂದಿರುಗಿಸುವುದು, ಅಫ್ಘಾನ್ ಪ್ರಜೆಗಳು ವಿಶೇಷವಾಗಿ ಅಲ್ಪಸಂಖ್ಯಾತರು ಭಾರತಕ್ಕೆ ಪ್ರಯಾಣಿಸುವುದು ಮತ್ತು ಅಫ್ಘಾನಿಸ್ತಾನವನ್ನು ಭಾರತದ ವಿರುದ್ಧ ಭಯೋತ್ಪಾದನೆಗೆ ಯಾವುದೇ ರೀತಿಯಲ್ಲಿ ಬಳಸದಂತೆ ನೋಡಿಕೊಳ್ಳುವುದರ ಬಗ್ಗೆ ನಿಗಾವಹಿಸಲು ಸೂಚಿಸಲಾಗಿದೆ ಎನ್ನಲಾಗಿದೆ.
ಇನ್ನೂ ಅಫ್ಘಾನಿಸ್ತಾನದಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವುದು ಭಾರತದ ತಕ್ಷಣದ ಆದ್ಯತೆಯಾಗಿದೆ. ಭಾರತದ ವಿರುದ್ಧ ಭಯೋತ್ಪಾದನೆಗೆ ಅಫಘಾನ್ ನೆಲ ಬಳಸುವುದಿಲ್ಲ ಎಂದು ಖಾತರಿಪಡಿಸಿಕೊಳ್ಳಲು ವಿದೇಶಾಂಗ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ತಂಡ ರಚಿಸಲಾಗಿದ್ದು, ಭಾರತದ ತಕ್ಷಣದ ಆದ್ಯತೆಗಳ ಮೇಲೆ ಕೇಂದ್ರೀಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಈ ತಂಡಕ್ಕೆ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ
Raksha Deshpande

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

5 hours ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

5 hours ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

5 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

6 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

6 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

7 hours ago