Categories: ವಿದೇಶ

ಅಫ್ಘಾನ್ ಜೈಲುಗಳಿಂದ ಹೊರಬಂದ ಉಗ್ರರ ಟಾರ್ಗೆಟ್ ಭಾರತ ?

ನವದೆಹಲಿ ; ಇತ್ತೀಚಿಗೆ ಆಫ್ಘಾನಿಸ್ತಾನದ ಜೈಲುಗಳಿಂದ ಬಿಡುಗಡೆಯಾದ 100ಕ್ಕೂ ಜೈಷ್-ಇ-ಮೊಹಮ್ಮದ್ ಉಗ್ರರು ಜಮ್ಮು-ಕಾಶ್ಮೀರ ಸೇರಿಂತೆ ಭಾರತದಲ್ಲಿ ವಿದ್ವಂಶಕ ಕೃತ್ಯಗಳನ್ನು ನಡೆಸಲು ಸಜ್ಜಾಗಿದ್ದಾರೆ ಎಂಬ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಭಾರತೀಯ ಭದ್ರತಾ ಪಡೆಗಳ ಮಾಹಿತಿ ಪ್ರಕಾರ ಭಾರತ ವಿರೋಧಿ ಮನಸ್ಥಿತಿ ಹೊಂದಿರುವ ಉಗ್ರಗಾಮಿಗಳನ್ನು ತಾಲಿಬಾನ್ ಆಫ್ಘಾನಿಸ್ತಾನ್ ಜೈಲುಗಳಿಂದ ಬಿಡುಗಡೆ ಮಾಡಿದೆ.
ಅವರು ಮತ್ತೆ ಜೈಷ್-ಇ-ಮೊಹಮ್ಮದ್ ಸಂಘಟನೆಗೆ ಸೇರ್ಪಡೆಯಾಗಿದ್ದು, ಭಾರತದಾದ್ಯಂತ ಹಿಂಸಾತ್ಮಕ ಕೃತ್ಯಗಳನ್ನು ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಜೈಷ್-ಇ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಇರುವ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಪೋಸ್ಟ್‍ಗಳು ಲಭ್ಯವಾಗಿವೆ ಎಂದು ಹೇಳಲಾಗಿದೆ. ಜೈಷ್-ಇ.ಮೊಹಮ್ಮದ್ ಸಂಘಟನೆಯ ಉನ್ನತ ನಾಯಕ ಮಸೂದ್ ಅಜರ್ ದಾಳಿಯ ಯೋಜನೆ ರೂಪಿಸಿದ್ದಾನೆ ಎಂದು ಹೇಳಲಾಗಿದೆ.
ಆಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಜಯ ಉಗ್ರಸಂಘಟನೆಗಳಿಗೆ ಮತ್ತಷ್ಟು ಉತ್ತೇಜನ ನೀಡಿದ್ದು, ಉಗ್ರ ಚಟುವಟಿಕೆಗಳ ಮೂಲಕವೇ ಸಾಂಸ್ಥಿಕ ನಿಯಂತ್ರಣ ಸಾಧಿಸಲು ಸಾಧ್ಯ. ಕಳೆದ ವಾರದ ನಮ್ಮವರು ಹಾರಿಸಿದ ವಿಜಯಪತಾಕೆ ಮಾದರಿ ಎಂದು ಮಸೂದ್ ಅಜರ್ ಹೇಳಿಕೊಂಡಿದ್ದಾನೆ ಎಂದು ಭದ್ರತಾ ಪಡೆಗಳು ಗುರುತಿಸಿವೆ.

Indresh KC

Recent Posts

ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ಯಾಕೆ ಒಪ್ಪಿಗೆ ನೀಡಿದ್ದು?

ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ   ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…

7 mins ago

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

23 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

48 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

1 hour ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

1 hour ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

2 hours ago