Categories: ವಿದೇಶ

ಅಮೆರಿಕದ ಉನ್ನತ ಹುದ್ದೆಗೆ ಭಾರತೀಯ ಮೂಲದ ಗೌತಮ್ ರಾಘವನ್​​ರನ್ನು ನೇಮಕ

ಅಮೆರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷ ಜೋ ಬೈಡನ್ ಸರ್ಕಾರದ ಹಲವು ಉನ್ನತ ಹುದ್ದೆಗಳಲ್ಲಿ ಭಾರತೀಯ ಮೂಲದ ಅಮೆರಿಕನ್ನರಿಗೆ ಸ್ಥಾನ ಸಿಗುತ್ತಿದೆ. ಅಮೆರಿಕ ಆಡಳಿತದ ಪ್ರಮುಖ ಹುದ್ದೆಗಳಲ್ಲಿ ಭಾರತೀಯ ಮೂಲದ ವ್ಯಕ್ತಿಗಳು ಸ್ಥಾನ ಅಲಂಕರಿಸುತ್ತಿದ್ದಾರೆ.

ಬಹುಮುಖ್ಯವಾಗಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಕೂಡ ಭಾರತೀಯ ಮೂಲದವರೇ ಆಗಿದ್ದಾರೆ. ಹೀಗೆ ಉನ್ನತ ಹುದ್ದೆ ಅಲಂಕರಿಸಿದವರಲ್ಲಿ ಒಬ್ಬರಾಗಿದ್ದ ಭಾರತ ಮೂಲದ ಗೌತಮ್​ ರಾಘವನ್‌ರನ್ನು ಇದೀಗ ಒಂದು ಹೊಸ ಮತ್ತು ಬಹುಮುಖ್ಯ ಹುದ್ದೆಗೆ ನೇಮಕ ಮಾಡುವ ಮೂಲಕ ಅವರಿಗೆ ಬಡ್ತಿ ನೀಡಲಾಗಿದೆ.

ವೈಟ್‌ಹೌಸ್‌ನ ಅಧ್ಯಕ್ಷೀಯ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ ಗೌತಮ್​ ರಾಘವನ್ ಅವರ ನೇಮಕಾತಿಯನ್ನು ಅಧ್ಯಕ್ಷ ಜೋ ಬೈಡನ್ ಘೋಷಿಸಿದ್ದಾರೆ.

ಈ ಮೊದಲು ವೈಟ್‌ಹೌಸ್​ನ ಅಧ್ಯಕ್ಷೀಯ ಸಿಬ್ಬಂದಿ ಮುಖ್ಯಸ್ಥರಾಗಿದ್ದ ಕ್ಯಾಥಿ ರಸೆಲ್‌ರನ್ನು ಯುನಿಸೆಫ್​​ನ ಮುಂದಿನ ಮುಖ್ಯ ಕಾರ್ಯನಿರ್ವಾಹಕರನ್ನಾಗಿ ನೇಮಕ ಮಾಡಿ ವಿಶ್ವಸಂಸ್ಥೆ​ ಕಾರ್ಯದರ್ಶಿ ಅಂಟೋನಿಯೋ ಗುಟೆರೆಸ್​ ಅವರು ಆದೇಶ ಹೊರಡಿಸಿದ ಬೆನ್ನಲ್ಲೇ, ತೆರವಾದ ಸ್ಥಾನಕ್ಕೆ ಭಾರತೀಯ ಮೂಲದ ಗೌತಮ್ ರಾಘವನ್​ ಆಯ್ಕೆ ಆಗಿದ್ದಾರೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್​, ಗೌತಮ್​ ರಾಘವನ್​ ಅವರು ಕ್ಯಾಥಿಯವರೊಂದಿಗೆ ಒಂದನೇ ದಿನದಿಂದಲೇ ಕೆಲಸ ಮಾಡುತ್ತಿದ್ದಾರೆ. ಅವರು ಇನ್ನು ಮುಂದೆ ಪಿಪಿಒ (Office of Presidential Personnel)ದ ಮುಂದಿನ ನಿರ್ದೇಶಕರಾಗಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಸಮರ್ಥ, ದಕ್ಷವಾಗಿ, ಪರಿಣಾಮಕಾರಿ ಮತ್ತು ವಿಶ್ವಾಸಾರ್ಹ ಕಾರ್ಯಪಡೆ ನಿರ್ಮಾಣದ ಕೆಲಸ ಮುಂದುವರಿಸಲು ಅವರಿಗೆ ಅನುವು ಮಾಡಿಕೊಡಲಾಗುವುದು ಎಂದಿದ್ದಾರೆ. ಅಂದಹಾಗೆ, ರಾಘವನ್ ಇಷ್ಟು ದಿನ ಅಧ್ಯಕ್ಷೀಯ ಸಿಬ್ಬಂದಿ ಕಚೇರಿಯ ಉಪ ನಿರ್ದೇಶಕ ಮತ್ತು ಅಮೆರಿಕ ಅಧ್ಯಕ್ಷರ ಉಪ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು.

ಗೌತಮ್ ರಾಘವನ್​ ಎಲ್​ಜಿಬಿಟಿಕ್ಯೂ ಸಮುದಾಯಕ್ಕೆ ಸೇರಿದವರು

ಗೌತಮ್​ ರಾಘವನ್​ ಮೊದಲ ಪೀಳಿಗೆಯ ವಲಸಿಗರ ಸಾಲಿಗೆ ಸೇರಿದವರು. ಇವರು ಭಾರತದಲ್ಲಿಯೇ ಹುಟ್ಟಿದ್ದರೂ, ಬೆಳೆದಿದ್ದು ಯುಎಸ್​​ನ ಸಿಯಾಟಲ್‌ನಲ್ಲಿ. ಸ್ಟ್ಯಾಂಡ್​ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದಾರೆ.

ಅಮೆರಿಕ ಅಧ್ಯಕ್ಷರ ಸ್ಥಾನ ಮತ್ತು ಅಧ್ಯಕ್ಷೀಯ ಸಿಬ್ಬಂದಿಯ ವೈಯಕ್ತಿಕ ನೋಟವನ್ನು ನೀಡುವ ವೆಸ್ಟ್​ ವಿಂಗರ್ಸ್​: ಸ್ಟೋರೀಸ್ ಫ್ರಾಂ ಡ್ರೀಂ ಚೀಸರ್ಸ್​, ಚೇಂಜ್ ಮೇಕರ್ಸ್​ ಆಯಂಡ್​ ಹೋಪ್​ ಕ್ರಿಯೇಟರ್ಸ್​ ಇನ್​ಸೈಡ್​ ದಿ ಒಬಾಮಾ ವೈಟ್‌ಹೌಸ್​ ಎಂಬ ಪುಸ್ತಕದ ಸಂಪಾದಕರೂ ಆಗಿದ್ದಾರೆ.

ಇನ್ನೂ ಮುಖ್ಯವಾಗಿ ರಾಘವನ್ ಒಬ್ಬರು ಎಲ್​ಜಿಬಿಟಿಕ್ಯೂ ಸಮುದಾಯದಕ್ಕೆ ಸೇರಿದವರಾಗಿದ್ದು, ಯುಎಸ್​ನಲ್ಲಿ ಬರಾಕ್​ ಒಬಾಮಾ ಅಧ್ಯಕ್ಷರಾಗಿದ್ದಾಗ, ಇವರು ಎಲ್​ಜಿಬಿಟಿಕ್ಯೂ ಮತ್ತು ಏಷ್ಯನ್ ಅಮೆರಿಕನ್​, ಫೆಸಿಪಿಕ್​ ಐ​ಲ್ಯಾಂಡರ್​ ಸಮುದಾಯಕ್ಕೆ ಸಂಪರ್ಕಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Sneha Gowda

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

12 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

23 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

31 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

33 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

45 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

54 mins ago