ವಿದೇಶ

ಅಮೆರಿಕಾದ ಗುಪ್ತಚರ CIA ಹುದ್ದೆಗೆ ಭಾರತೀಯ ಮೂಲದ ವ್ಯಕ್ತಿ ನಂದ್ ಮುಲ್ಚಂದಾನಿ ನೇಮಕ

ಅಮೆರಿಕಾದ ಕೇಂದ್ರೀಯ ಗುಪ್ತಚರ ಸಂಸ್ಥೆಯ (CIA) ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿ ಭಾರತೀಯ ಮೂಲದ ವ್ಯಕ್ತಿ ನಂದ್ ಮುಲ್ಚಂದಾನಿ ನೇಮಕಗೊಂಡಿದ್ದಾರೆ.

ಈ ಬಗ್ಗೆ ಸಿಐಎ ನಿರ್ದೇಶಕ ವಿಲಿಯಂ ಜೆ ಬರ್ನ್ಸ್ ಅವರು ಬ್ಲಾಗ್ ಸ್ಪಷ್ಟಪಡಿಸಿದ್ದು, ಏಜೆನ್ಸಿಯ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಮಾಡಲಾಗಿದೆ.

ಈ ಬಗ್ಗೆ ಮುಲ್ಚಂದಾನಿ ಹರ್ಷ ವ್ಯಕ್ತಪಡಿಸಿದ್ದು, CIA ಗೆ ನೇಮಕಗೊಂಡಿರುವುದು ನನಗೆ ಹೆಮ್ಮೆಯೆನಿಸುತ್ತಿದೆ ಜೊತೆಗೆ ಸಮಗ್ರ ತಂತ್ರಜ್ಞಾನ, ಕಾರ್ಯತಂತ್ರವನ್ನು ನಿರ್ಮಿಸಲು ಹೊರಟಿರುವ ವಿಶ್ವದರ್ಜೆಯ ಬುದ್ಧಿವಂತಿಕೆ ಮತ್ತು ಸಾಮರ್ಥ್ಯಗಳನ್ನು ಒದಗಿಸುವ ಏಜೆನ್ಸಿಯ ಅದ್ಭುತ ತಂತ್ರಜ್ಞರು ಮತ್ತು ಡೊಮೇನ್ ತಜ್ಞರ ತಂಡದೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದರು.

ಮುಲ್ಚಂದಾನಿ 25 ವರ್ಷಗಳ ಅನುಭವವನ್ನು ಹೊಂದಿದ್ದಾರೆ ಮತ್ತು “CIA ಅತ್ಯಾಧುನಿಕ ಆವಿಷ್ಕಾರಗಳನ್ನು ನಡೆಸಲು ಮುಂದಾಗಿದೆ ಇಂತಹ ಸಂಸ್ಥೆಗೆ ಮುಲ್ಚಂದಾನಿಯಂತಹ ಪ್ರತಿಭಾವಂತವರ ಅವಶ್ಯಕತೆ ಇದೆ ಎಂದು
CIA ಹೇಳಿಕೆ ನೀಡಿದೆ.

ಬೇರೆ ಬೇರೆ ಉದ್ಯಮಗಳನ್ನು ಕಟ್ಟುವಲ್ಲಿ ಪರಿಣಿತಿ ಇರುವುದಾಗಿ ಮುಲ್ಚಿಂದಾನಿ ಹೇಳಿಕೊಂಡಿದ್ದಾರೆ. 1987ರಲ್ಲಿ ದೆಹಲಿಯ ಬ್ಲೂಬೆಲ್ಸ್ ಸ್ಕೂಲ್ ಇಂಟರ್‌ನ್ಯಾಶನಲ್‌ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದು, ಕಾರ್ನೆಲ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಮತ್ತು ಗಣಿತಶಾಸ್ತ್ರದಲ್ಲಿ (1988-91) ಸ್ನಾತಕೋತ್ತರ ಪದವಿಯನ್ನು ಪಡೆದರು. ಬಳಿಕ (2017-18)ರಲ್ಲಿ ಸ್ಟ್ಯಾನ್‌ಫೋರ್ಡ್ ಬಿಸಿನೆಸ್ ಸ್ಕೂಲ್‌ನಿಂದ ಮ್ಯಾನೇಜ್‌ಮೆಂಟ್‌ನಲ್ಲಿ ಮಾಸ್ಟರ್ ಆಫ್ ಸೈನ್ಸ್ ಪದವಿ, ಹಾರ್ವರ್ಡ್‌ನ ಕೆನಡಿ ಸ್ಕೂಲ್ ಆಫ್ ಗವರ್ನಮೆಂಟ್‌ನಿಂದ ಸಾರ್ವಜನಿಕ ಆಡಳಿತದಲ್ಲಿ (2018-19) ಮತ್ತೊಂದು ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಎಂಟರ್‌ಪ್ರೈಸ್ ಮೂಲಸೌಕರ್ಯ ಉತ್ಪನ್ನಗಳು, ಮಾರ್ಕೆಟಿಂಗ್ ಮತ್ತು ಮಾರಾಟಗಳಲ್ಲಿ ಬಲವಾದ ಹಿನ್ನೆಲೆ ಹೊಂದಿರುವ ಅವರು ಇಲ್ಲಿಯವರೆಗೆ ಒಬ್ಲಿಕ್ಸ್ (ಒರಾಕಲ್‌ನಿಂದ ಸ್ವಾಧೀನಪಡಿಸಿಕೊಂಡಿದೆ), ಡಿಟರ್ಮಿನಾ (ವಿಎಂವೇರ್‌ನಿಂದ ಸ್ವಾಧೀನಪಡಿಸಿಕೊಂಡಿದೆ), ಓಪನ್‌ಡಿಎನ್‌ಎಸ್ (ಸಿಸ್ಕೊದಿಂದ ಸ್ವಾಧೀನಪಡಿಸಿಕೊಂಡಿದೆ) ನಂತಹ ಬಹು ಸ್ಟಾರ್ಟ್‌ಅಪ್‌ಗಳ ಸಹ-ಸ್ಥಾಪಕ ಮತ್ತು ಸಿಇಒ ಆಗಿದ್ದರು.

CIA ಯ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿ ಹೊಸ ಹುದ್ದೆ ಅಲಂಕರಿಸುವುದಕ್ಕೂ ಮುನ್ನ ಮುಲ್ಚಂದಾನಿ CTO ಮತ್ತು DoD ಯ ಜಂಟಿ ಕೃತಕ ಬುದ್ಧಿಮತ್ತೆ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

6 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

6 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

7 hours ago