Categories: ವಿದೇಶ

ಅರುಣಾಚಲ ಪ್ರದೇಶದ ಗ್ರಾಮೀಣ ಭಾಗದಲ್ಲಿ ಲಸಿಕೆ ಪಡೆದರೆ 20 ಕೆಜಿ ಅಕ್ಕಿ ಉಚಿತ

ಇಟಾನಗರ: ದೇಶದಲ್ಲಿ ಅನೇಕ ಮಂದಿ ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಅರುಣಾಚಲಪ್ರದೇಶದ ಗ್ರಾಮೀಣ ಪ್ರದೇಶಗಳಲ್ಲಿ ಜನರನ್ನು ಆಕರ್ಷಿಸಲು ಹೊಸದೊಂದು ದಾರಿಯನ್ನು ಹುಡುಕಿದ್ದಾರೆ. 

 ಜನರು ಕೋವಿಡ್ ಲಸಿಕೆ ಪಡೆಯುವುದನ್ನು ಉತ್ತೇಜಿಸಲು ಲಸಿಕೆ ಪಡೆದವರಿಗೆ 20 ಕೆ.ಜಿ ಉಚಿತ ಅಕ್ಕಿಯ ಮಾಡಿದೆ ನೀಡುವುದಾಗಿ ಘೋಷಿಸಿದ್ದಾರೆ.  

ಈ ಘೋಷಣೆಯಿಂದ ಅರುಣಾಚಲ ಪ್ರದೇಶದ ಆಡಳಿತ ವಲಯದ ಗ್ರಾಮಸ್ಥರಲ್ಲಿ ವ್ಯಾಕ್ಸಿನೇಷನ್ ಬಗ್ಗೆ ವದಂತಿಗಳನ್ನು ಹೋಗಲಾಡಿಸುವ ನಿರೀಕ್ಷೆಯು ಸಾಕಷ್ಟು ಲಾಭದಾಯಕವಾಗಿದೆ.ಏಕೆಂದರೆ, 80 ಕ್ಕೂ ಹೆಚ್ಚು ಜನರು ಈ ಘೋಷಣೆಯಾದ ಕೆಲವೇ ದಿನಗಳಲ್ಲಿ ಲಸಿಕೆ ಹಾಕಿಸಿಕೊಳ್ಳಲು ಕಾಲ್ನಡಿಗೆಯಲ್ಲಿ ಬಂದಿದ್ದಾರೆ.

 

ಸುಬನ್ಸಿರಿ ಜಿಲ್ಲೆಯ ಯಜಾಲಿಯ ವೃತ್ತಾಧಿಕಾರಿ ತಾಶಿ ವಾಂಗ್‌ಚುಕ್ ಥೊಂಗ್ಡಾಕ್ ಅವರು ಈ ಉಪಾಯ ಮಾಡಿದ್ದು, ಲಸಿಕೆ ಹಾಕಿಸಿಕೊಳ್ಳುವ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಅಕ್ಕಿ ನೀಡುವಿಕೆಯನ್ನು ಪ್ರಾರಂಭಿಸಿದ್ದಾರೆ.

 

‘ಲಸಿಕೆ ವಿತರಣೆ ಸುಧಾರಿಸಲು ನಮ್ಮ ವೃತ್ತ ಮತ್ತು ಜಿಲ್ಲೆಯಲ್ಲಿ ನಾವು ನಿರಂತರವಾಗಿ ಕಾರ್ಯತಂತ್ರಗಳನ್ನು ರೂಪಿಸಲು ಪ್ರಯತ್ನಿಸುತ್ತಿದ್ದೇವೆ.ಯಜಾಲಿ ವೃತ್ತದಲ್ಲಿ 45 ವರ್ಷಕ್ಕೂ ಮೇಲ್ಪಟ್ಟ 1,399 ಜನರಿದ್ದಾರೆ’ ಎಂದು ಅಧಿಕಾರಿ ಹೇಳಿದ್ದಾರೆ.

 

 

Desk

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

4 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

4 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

4 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

5 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

5 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

5 hours ago