ವಿದೇಶ

ಆಗಸ್ಟ್‌ ಅಂತ್ಯ ಕೋವಿಡ್‌ 3ನೇ ಅಲೆ ಸಾಧ್ಯತೆ: ಐಸಿಎಂಆರ್‌ ಎಚ್ಚರಿಕೆ

ನವದೆಹಲಿ: ಭಾರತ ದೇಶದಲ್ಲಿ ಕೋವಿಡ್‌-19 ಮೂರನೇ ಅಲೆಯು ಆಗಸ್ಟ್‌ ಅಂತ್ಯದ ವೇಳೆಗೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಎಚ್ಚರಿಸಿದೆ.

ಮೂರನೇ ಅಲೆಯು ದೇಶವ್ಯಾಪಿ ಇರಲಿದೆ. ಆದರೆ, ಎರಡನೇ ಅಲೆಯಷ್ಟು ತೀವ್ರವಾಗಿ ಇರುವುದಿಲ್ಲ ಎಂದು ಐಸಿಎಂಆರ್‌ ಸಾಂಕ್ರಾಮಿಕ ರೋಗಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಮೀರನ್‌ ಪಂಡಾ ಹೇಳಿದ್ದಾರೆ.

38,949 ಹೊಸ ಪ್ರಕರಣ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 38,949 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 542 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಪತ್ತೆಯಾದ ಒಟ್ಟು ಪ್ರಕರಣಗಳ ಸಂಖ್ಯೆ 3,10,26,829ಗೆ ತಲುಪಿದ್ದು, ಸಾವಿನ ಸಂಖ್ಯೆ 4,12,531ಕ್ಕೆ ತಲುಪಿದೆ. 3,01,83,876 ಸೋಂಕಿತರು ಗುಣಮುಖರಾಗಿದ್ದು, ಇನ್ನೂ 4,30,422 ಸಕ್ರಿಯ ಪ್ರಕರಣಗಳಿವೆ.

Sampriya YK

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

13 seconds ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

23 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

39 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago