News Karnataka Kannada
Friday, May 03 2024
ವಿದೇಶ

ಆಫಘನಿಸ್ತಾನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯ ನಿರ್ವಹಣೆ : ಎಸ್. ಜೈ ಶಂಕರ್

Jai Shankar Delhi 29 6 21
Photo Credit :

ನವದೆಹಲಿ: ಆಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ವಿಶ್ವಸಂಸ್ಥೆಯ ಭಾರತದ ಪ್ರಸ್ತುತ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ “ಭಯೋತ್ಪಾದಕ ಕೃತ್ಯಗಳಿಂದ ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಬೆದರಿಕೆಗಳು” ಎಂಬ ಉನ್ನತ ಮಟ್ಟದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಎಸ್ ಜೈಶಂಕರ್ ಅವರು, ‘ಭಾರತವು  ಅಫ್ಘಾನ್ ಜನರೊಂದಿಗೆ ಐತಿಹಾಸಿಕ ಸಂಬಂಧವನ್ನು ಹೊಂದಿದ್ದು, ಅದು ತನ್ನ ಆಲೋಚನೆಗಳು ಮತ್ತು ದೃಷ್ಟಿಕೋನಕ್ಕೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸುತ್ತದೆ ಎಂದು ಎಸ್ ಜೈಶಂಕರ್ ಹೇಳಿದರು.

ಹಾಲಿ ಆಫ್ಘಾನಿಸ್ತಾನದ ಪರಿಸ್ಥಿತಿ ಕುರಿತು ನಾವು ಗಮನ ಕೇಂದ್ರೀಕರಿಸಿದ್ದೇವೆ. ಆಪ್ಘನ್ ದೇಶದಲ್ಲಿ ಇರುವ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರುವುದು ನಮ್ಮ ಮೊದಲ ಆದ್ಯತೆಯಾಗಿದೆ. ನಾವು ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಪಾಲುದಾರರೊಂದಿಗೆ ಕೆಲಸ ಮಾಡುತ್ತಿದ್ದೇವೆ, ವಿಶೇಷವಾಗಿ ಅಮೆರಿಕದೊಂದಿಗೆ. ಅಮೆರಿಕ ಕಾಬುಲ್ ವಿಮಾನ ನಿಲ್ದಾಣವನ್ನು ನಿಯಂತ್ರಿಸುತ್ತಿದೆ. ನಾವು ನೋಡುತ್ತಿರುವ ತಕ್ಷಣದ ಸಮಸ್ಯೆ ನಿಜವಾಗಿಯೂ ನಮ್ಮ ಪ್ರಜೆಗಳ ವಾಪಸಾತಿಯಾಗಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು