Categories: ವಿದೇಶ

ಆಫ್ಘಾನಿಸ್ತಾನ: ತಾಲಿಬಾನ್ ಸರ್ಕಾರ ರಚನೆಗೆ ಕಸರತ್ತು

ಕಾಬೂಲ್: ಅಮೇರಿಕಾ ಸೇನೆ ಹಿಂತೆಗೆತ ಮತ್ತು ಆಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಂಡ ಬಳಿಕ ತಾಲಿಬಾನ್ ಸರ್ಕಾರ ರಚನೆಗೆ ಅಂತಿಮ ಕಸರತ್ತು ನಡೆಸುತ್ತಿದೆ. ತಾಲಿಬಾನ್ ಸಹ ಸಂಸ್ಥಾಪಕ ಮುಲ್ಲಾ ಬರಾದರ್ ನೇತೃತ್ವದಲ್ಲೇ ಆಫ್ಘನ್ ಸರ್ಕಾರ ರಚನೆಯಾಗಲಿದೆ.

ಈ ಬಗ್ಗೆ ಸ್ವತಃ ತಾಲಿಬಾನ್ ಸಂಘಟನೆ ಮಾಹಿತಿ ನೀಡಿದ್ದು, ತಾಲಿಬಾನ್ ಸಹ-ಸಂಸ್ಥಾಪಕ ಮುಲ್ಲಾ ಬರಾದರ್ ಹೊಸ ಅಫ್ಘಾನ್ ಸರ್ಕಾರವನ್ನು ಮುನ್ನಡೆಸಲಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ಹೇಳಿದೆ.

ಇನ್ನು ಅಮೆರಿಕ ಸೇನೆ ಆಫ್ಘಾನಿಸ್ತಾನದಿಂದ ಕಾಲ್ಕಿತ್ತ ಬಳಿಕ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು ಮೊದಲೇ ಸಂಕಷ್ಟದಲ್ಲಿದ್ದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಸರ್ಕಾರಿ ಸಂಸ್ಥೆಗಳು ಸಂಪೂರ್ಣವಾಗಿ ನಿಷ್ಕ್ರಿಯವಾಗಿದ್ದು, ಸರ್ಕಾರಿ ಕಚೇರಿಗಳು ಸಿಬ್ಬಂದಿಗಳಿಲ್ಲದೇ ಮುಚ್ಚಲ್ಪಟ್ಟಿವೆ. ಅಲ್ಲದೆ ಗಾಯದ ಮೇಲೆ ಬರೆ ಎಂಬಂತೆ ಅತ್ತ ಪಂಜ್ ಶೀರ್ ನಲ್ಲಿ ತಾಲಿಬಾನ್ ಆಡಳಿತವನ್ನು ಒಪ್ಪಿಕೊಳ್ಳದ ನಾರ್ಥರ್ನ್ ಅಲಯನ್ಸ್ ಪಡೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು ಅಲ್ಲಿಯೂ ಭೀಕರ ಯುದ್ಧ ಮುಂದುವರೆದಿದೆ.

ಹೀಗಾಗಿ ನೂತನ ಸರ್ಕಾರ ರಚನೆ ಮಾಡುತ್ತಿರುವ ತಾಲಿಬಾನ್ ಮೇಲೆ ಅತೀವ ಒತ್ತಡವಿದ್ದು, ಸರ್ಕಾರ ರಚನೆ ಮಾಡಿದರೂ ತಾಲಿಬಾನ್ ಗೆ ಆಡಳಿತ ಕಬ್ಬಿಣದ ಕಡಲೆಯಾಗಿರಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Sampriya YK

Recent Posts

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

2 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

20 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

36 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

55 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

59 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago