News Karnataka Kannada
Tuesday, April 30 2024
ವಿದೇಶ

ಆಫ್ರಿಕಾದ ಸಿಯೆರಾ ಲಿಯೋನ್​ನಲ್ಲಿ ತೈಲ ಟ್ಯಾಂಕರ್ ಸ್ಫೋಟ: 92 ಮಂದಿ ಸಜೀವ ದಹನ

Accident Ckm Car Main 08072021
Photo Credit :

ದಕ್ಷಿಣ ಆಫ್ರಿಕಾದ ದೇಶವಾದ ಸಿಯೆರಾ ಲಿಯೋನ್​ನ ರಾಜಧಾನಿ ಫ್ರೀಟೌನ್ ನಗರದಲ್ಲಿ ತೈಲ ಟ್ಯಾಂಕರ್ ಸ್ಫೋಟಗೊಂಡು ಸುಮಾರು 92 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಫ್ರೀಟೌನ್​ನ ಪೂರ್ವಕ್ಕಿರುವ ವೆಲ್ಲಿಂಗ್ಟನ್​ ಎಂಬಲ್ಲಿ ಘಟನೆ ನಡೆದಿದೆ. ಟ್ಯಾಂಕರ್​ಗೆ ಬಸ್ಸೊಂದು ಡಿಕ್ಕಿ ಹೊಡೆದಿತ್ತು. ಈ ವೇಳೆ ಟ್ಯಾಂಕರ್​ನಿಂದ ಇಂಧನ ಸೋರಿಕೆ ಆಗಿದ್ದು, ಇದನ್ನು ತುಂಬಿಕೊಳ್ಳಲು ಜನರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಸ್ಫೋಟ ಸಂಭವಿಸಿದೆ. ಪರಿಣಾಮ, ಸಾಕಷ್ಟು ಮಂದಿಯ ಸಾವಿಗೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕನ್ನಾಟ್ ಆಸ್ಪತ್ರೆಯ ವರದಿಯ ಪ್ರಕಾರ, 92 ಮಂದಿ ಸಾವನ್ನಪ್ಪಿದ್ದಾರೆ. 30 ಮಂದಿ ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಆಸ್ಪತ್ರೆಯ ಸಿಬ್ಬಂದಿ ಫೋಡೆ ಮುಸಾ ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಹಲವು ವಾಹನಗಳೂ ಕೂಡಾ ಸುಟ್ಟು ಭಸ್ಮವಾಗಿವೆ.ಸಿಯೆರಾ ಲಿಯೋನ್ ಅಧ್ಯಕ್ಷ ಜ್ಯೂಲಿಯಸ್ ಮಾಡ ಬಯೊ ಹಾಗೂ ಉಪಾಧ್ಯಕ್ಷ ಮೊಹಮದ್ ಜುಲ್ದೆ ಜಲ್ಹೋ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಏಜೆನ್ಸಿ ಮತ್ತು ಸ್ವಯಂಸೇವಾ ಸಂಘಟನೆಗಳಿಂದ ರಕ್ಷಣಾ ಕಾರ್ಯ ಜರುಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು