ಭಾರತ ಸರ್ಕಾರದ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಯೋಜನೆಯನ್ನು ಬಿಲೇನಿಯರ್ ಬಿಲ್ಗೇಟ್ಸ್ ಶ್ಲಾಘಿಸಿದ್ದು, ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ.
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಭಾರತದಲ್ಲಿ ನ್ಯಾಯಸಮ್ಮತ ಆರೋಗ್ಯ ರಕ್ಷಣೆ ಖಚಿತಪಡಿಸುತ್ತದೆ. ಇದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳಬೇಕು. ಈ ಯೋಜನೆಯಿಂದ ಭಾರತದ ಆರೋಗ್ಯ ಪ್ರಗತಿ ವೇಗಗೊಳ್ಳಲಿದೆ ಎಂದಿದ್ದಾರೆ.
ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ, ಆರೋಗ್ಯ ಮೂಲಸೌಕರ್ಯದ ಸುಧಾರಣೆಗಾಗಿ ತಂತ್ರಜ್ಞಾನದ ಬಳಕೆ ಹೆಚ್ಚಿಸಲು ಅಪಾರವಾದ ಅವಕಾಶ ಇಲ್ಲಿದೆ. ಅದನ್ನು ಸಾಧಿಸಲು ಭಾರತ ಶ್ರಮಿಸುತ್ತಿದೆ ಎಂದಿದ್ದಾರೆ.
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ಗೆ ಪ್ರಧಾನಿ ಮೋದಿ ಅವರು ಇತ್ತೀಚೆಗಷ್ಟೇ ಚಾಲನೆ ನೀಡಿದ್ದರು. ಈ ಯೋಜನೆಯಿಂದ ಪ್ರತಿಯೊಬ್ಬ ನಾಗರಿಕನಿಗೂ ಆರೋಗ್ಯ ಐಡಿ ಸಿಗುತ್ತದೆ. ಅದನ್ನು ಅವರ ಆರೋಗ್ಯ ಖಾತೆಯಾಗಿ ಬಳಸಲಾಗುತ್ತದೆ. ಈ ಉಪಕ್ರಮದಿಂದ ಬಡ ಮತ್ತು ಮಧ್ಯಮ ವರ್ಗದ ವೈದ್ಯಕೀಯ ಚಿಕಿತ್ಸೆ ಸಮಸ್ಯೆಗಳು ನಿವಾರಣೆಯಾಗಲಿವೆ.