ಆಸ್ಟ್ರೇಲಿಯಾದಲ್ಲಿ ಮತ್ತೆ ಕೋವಿಡ್ ಸೋಂಕಿತರ ಪ್ರಕರಣದಲ್ಲಿ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಹೆಚ್ಚುತ್ತಿದೆ. ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯದಲ್ಲಿ ಬುಧವಾರ ಒಂದೇ ದಿನ 1,438 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಹಿಂದಿನ ದಿನಕ್ಕಿಂತ 500 ಪ್ರಕರಣ ಹೆಚ್ಚಿದೆ.
ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಬೆನ್ನಲ್ಲೇ ಲಸಿಕೆ ವಿತರಣೆಗೆ ಮತ್ತಷ್ಟು ವೇಗ ನೀಡಲಾಗಿದೆ. ಅಕ್ಟೋಬರ್ ತಿಂಗಳ ಅಂತ್ಯದ ವೇಳೆಗೆ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಒಟ್ಟು ಸೋಂಕಿನ ಪ್ರಕರಣಗಳ ಸಂಖ್ಯೆ 105,131 ಕ್ಕೆ ಏರಿಕೆಯಾಗಿದ್ದು, 1,290 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದುವವರೆಗೆ ಶೇ. 49 ರಷ್ಟು ಮಂದಿಗೆ ಲಸಿಕೆ ನೀಡಲಾಗಿದೆ.