ಜಕಾರ್ತ: ಪ್ರಬಲ ಭೂಕಂಪದಿಂದಾಗಿ ಏಳು ಮಂದಿ ಸಾವನ್ನಪ್ಪಿ, 8 ಸಾವಿರ ಮಂದಿ ನಿರಾಶ್ರಿತರಾಗಿರುವ ಘಟನೆ ಶನಿವಾರ ಇಂಡೋನೇಷ್ಯಾದ ಪಶ್ಚಿಮ ಭಾಗದಲ್ಲಿರುವ ಸುಲವೇಶಿ ಪ್ರಾಂತ್ಯದಲ್ಲಿ ಸಂಭವಿಸಿದೆ.
ರಕ್ಷಣಾ ಕಾರ್ಯಾಚರಣೆ ವೇಳೆ 7 ಶವಗಳು ಪತ್ತೆಯಾಗಿದೆ ಎಂದುವೆ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳು ತಿಳಿಸಿರುವುದಾಗಿ ವರದಿಗಳು ಹೇಳಿವೆ.
ಸುಮಾರು ಎಂಟು ಸಾವಿರ ಮಂದಿ ಮನೆಮಠಗಳನ್ನು ಕಳೆದುಕೊಂಡಿದ್ದಾರೆ ಮತ್ತು ಎಂಟು ಮನೆಗಳು ಮಣ್ಣಿನಲ್ಲಿ ಸಂಪೂರ್ಣವಾಗಿ ಮುಚ್ಚಿ ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಸಪ್ಟೆಂಬರ್ ನಲ್ಲಿ ಪಶ್ಚಿಮ ಸುಲವೇಸಿ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಲ್ಲಿ 2 ಸಾವಿರ ಜನರು ಸಾವನ್ನಪ್ಪಿದ್ದರು.