ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ದಿನಗಳ ಅಮೆರಿಕ ಪ್ರವಾಸ ಆರಂಭಿಸಿದ್ದು, ಇಂದು ಬೆಳಗ್ಗೆ ವಾಷಿಂಗ್ಟನ್ ಡಿಸಿಗೆ ಆಗಮಿಸಿದ್ದಾರೆ. ವಾಷಿಂಗ್ಟನ್ ಡಿಸಿಯ ಜಾಯಿಂಟ್ ಬೇಸ್ ಆಂಡ್ರೂಸ್ ವಾಯುನೆಲೆಗೆ ಬಂದಿಳಿದಿದ್ದಾರೆ. ಇಂದು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಜೊತೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ.
ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯರಿಂದ ಸಿಕ್ಕ ಭರ್ಜರಿ ಸ್ವಾಗತದ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಅಮೆರಿಕದಲ್ಲಿ ವಾಸಿಸುವ ಭಾರತೀಯರು ನನ್ನನ್ನನ್ನು ಸ್ವಾಗತಿಸಿದ್ದಾರೆ. ಹೃದಯ ತುಂಬಿಬಂದಿದೆ. ನಮ್ಮ ವಲಸಿಗರು ನಮ್ಮ ಶಕ್ತಿಯೇ ಹೌದು. ವಿಶ್ವದಲ್ಲಿ ಹೇಗೆ ನಮ್ಮ ದೇಶದ ಜನರು ಎಲ್ಲೆಡೆ ಸೇರಿದ್ದಾರೆ ಎನ್ನುವುದು ಖುಷಿಯ ವಿಷಯ ಎಂದಿದ್ದಾರೆ.
ಇಂದು ಪ್ರಧಾನಿ ಮೋದಿಯವರು ಐದು ಪ್ರಮುಖ ಕಂಪನಿಗಳ ಸಿಇಒಗಳನ್ನು ಭೇಟಿ ಮಾಡಲಿದ್ದಾರೆ. ಮಧ್ಯಾಹ್ನ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿ ಮಾಡಲಿದ್ದಾರೆ.