ವಿದೇಶ

ಇನ್ಮುಂದೆ ಇರಾನ್ ಟಿವಿಯಲ್ಲಿ ಮಹಿಳೆಯರು ಪಿಜ್ಜಾ ತಿನ್ನುವುದು, ಪುರುಷರು ಟೀ ಕೊಡುವ ದೃಶ್ಯ ಹಾಕುವಂತಿಲ್ಲ

ಇರಾನ್ ರಾಷ್ಟ್ರದಲ್ಲಿ ಹೊಸ ಸೆನ್ಸಾರ್ ನಿಯಮ ಜಾರಿಯಾಗಿದ್ದು, ಇದರಲ್ಲಿ ಒಂದೆರಡು ವಿಚಿತ್ರ ನಿರ್ಬಂಧ ಹೇರಿದೆ. ಇನ್ಮುಂದೆ ಟಿವಿಗಳಲ್ಲಿ ಪ್ರಸಾರವಾಗುವ ಜಾಹೀರಾತುಗಳಲ್ಲಿ ಮಹಿಳೆಯರು ಪಿಜ್ಜಾ ತಿನ್ನುವುದು ಹಾಗೂ ಪುರುಷರು ಮಹಿಳೆಯರಿಗೆ ಕಾಫಿ, ಟೀ ಕೊಡುವ ದೃಶ್ಯಗಳನ್ನು ಪ್ರಸಾರ ಮಾಡಲು ನಿರ್ಬಂಧಿಸಲಾಗಿದೆ.

ಸಾಮಾನ್ಯವಾಗಿ ಟಿವಿಗಳಲ್ಲಿ ಪ್ರಸಾರವಾಗುವ ಜಾಹೀರಾತುಗಳಲ್ಲಿ ಮಹಿಳೆಯರು ಹಾಗೂ ಪುರುಷರಿಗೆ ವಿಭಿನ್ನ ಕಾನ್ಸೆಪ್ಟ್ ಮೂಲಕ ಆಯಾ ಕಂಪನಿಗಳು ಕ್ರಿಯಾಶೀಲ ಜಾಹೀರಾತುಗಳನ್ನು ಮಾಡುತ್ತವೆ. ಆದರೆ ಇರಾನ್ ನ ಈ ಹೊಸ ನಿಯಮದ ಅನುಸಾರ ಮಹಿಳೆಯರು ಪಿಜ್ಜಾ ಸೇವಿಸುವುದು, ಕೋಲ್ಡ್ ಡ್ರಿಂಗ್ಸ್ ಕುಡಿಯುವುದು ಹಾಗೂ ಮಹಿಳೆಯರು ಚರ್ಮದ ಕೈಗವಸು ಧರಿಸಿರುವ ದೃಶ್ಯಗಳನ್ನು ಪ್ರಸಾರ ಮಾಡುವಂತಿಲ್ಲ ಎಂದಿದೆ.

ಇನ್ನು ಪುರುಷರ ಜಾಹೀರಾತಿಗೂ ನಿರ್ಬಂಧ ಹೇರಲಾಗಿದ್ದು, ಪುರುಷರು ಮಹಿಳೆಯರಿಗೆ ಟೀ, ಕಾಫಿ ಸರ್ವ್ ಮಾಡುವ ದೃಶ್ಯ ತೋರಿಸುವಂತಿಲ್ಲ ಎಂದು ಇರಾನ್ ಸೆನ್ಸಾರ್ ಮಂಡಳಿ ತಿಳಿಸಿದೆ. ಈ ನಿಯಮಗಳನ್ನು ಪಾಲಿಸದಿದ್ದರೆ ಟಿವಿ ಚಾನೆಲ್ ಗಳಿಗೆ ಭಾರೀ ದಂಡ ಕಟ್ಟಬೇಕಾಗುವುದು ಎಂದು ಎಚ್ಚರಿಸಿದೆ.

Sneha Gowda

Recent Posts

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

10 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

25 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

45 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 hour ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 hours ago