ಶ್ರೀನಗರ: ಭದ್ರತಾ ಪಡೆಗಳು ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿ, ಅವರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಂಡಿರುವ ಘಟನೆಯು ಜಮ್ಮುಕಾಶ್ಮೀರದ ಜವಾಹರ್ ಟನಲ್ ನಲ್ಲಿ ನಡೆದಿದೆ.
ಮಂಗಳವಾರ ತಡರಾತ್ರಿ ಮತ್ತು ಬುಧವಾರ ಮುಂಜಾನೆ ಈ ಕಾರ್ಯಾಚರಣೆಯು ನಡೆದಿದೆ. ಇಬ್ಬರು ಶಂಕಿತ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕುಲ್ಗಾಂವ್ ನಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಜವಾಹರ್ ಟನಲ್ ಸಮೀಪ ಇಬ್ಬರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಇವರು ಟ್ರಕ್ ಒಂದರಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದರು ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.