ಈಕ್ವೆಡಾರ್ ಗಯಾಕ್ವಿಲ್ನ ಜೈಲಿನಲ್ಲಿ ಗ್ರೆನೇಡ್ ಸ್ಫೋಟಗೊಂಡಿದ್ದು, 24 ಕೈದಿಗಳು ಮೃತಪಟ್ಟಿದ್ದಾರೆ. ಗ್ರೆನೇಡ್ ಸ್ಫೋಟದಿಂದ 48 ಕೈದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತಪಟ್ಟವರೆಲ್ಲರೂ ಮಾದಕ ವಸ್ತು ಸಾಗಾಟಕ್ಕೆ ಸಂಬಂಧಿಸಿ ವಿವಿಧ ಪ್ರಕರಣಗಳ ಆರೋಪಿಗಳಾಗಿದ್ದರು ಎಂದು ಜೈಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಈಕ್ವೆಡಾರ್ ಅಧ್ಯಕ್ಷ ಗಿಲ್ಲೆರ್ಮೊ ಲಾಸೊ ಮಾತನಾಡಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದಿದ್ದಾರೆ. ಕೈದಿಗಳು ಸ್ಫೋಟ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.