Categories: ವಿದೇಶ

ಉಕ್ರೇನ್-‌ ರಷ್ಯಾ ಯುದ್ಧ ಅಂತ್ಯಗೊಳಿಸಲು ಪ್ರಧಾನಿ ಮೋದಿ ಮಧ್ಯಪ್ರವೇಶಿಸಲಿ ಉಕ್ರೇನ್‌ ರಾಯಭಾರಿ ಮನವಿ

ಉಕ್ರೇನ್‌ ಮೇಲಿನ ರಷ್ಯಾ ದಾಳಿ ಅಂತ್ಯಗೊಳಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸುವಂತೆ ಉಕ್ರೇನ್‌ ನ ರಾಯಭಾರಿ ಡಾ. ಇಗೋರ್‌ ಪೊಲಿಖಾ ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಭಾವನಾತ್ಮಕವಾಗಿ ಮಾತನಾಡಿದ ಅವರು, “ರಷ್ಯಾ ಅಧ್ಯಕ್ಷ ವಿಶ್ವದ ಯಾವ ರಾಷ್ಟ್ರದ ನಾಯಕರ ಮಾತು ಕೇಳುತ್ತಾರೋ ತಿಳಿದಿಲ್ಲ.  ಭಾರತ ವಿಶ್ವದ ಬಲಿಷ್ಠ ರಾಷ್ಟ್ರವಾಗಿದೆ. ನಮಗೆ ಭಾರತದ ಪ್ರಧಾನಿ ಮೋದಿ ಅವರ ಮೇಲೆ ಭರವಸೆ ಇದೆ.

ಪ್ರಧಾನಿ ಮೋದಿ ಅವರ ಮಾತನ್ನಾದರೂ ಪುಟಿನ್‌ ಯೋಚಿಸಬೇಕು. ನಾವು ಭಾರತದಿಂದ ಹೆಚ್ಚು ನಿರೀಕ್ಷೆ ಹೊಂದಿದ್ದೇವೆ. ಹಾಗಾಗಿ ಉಕ್ರೇನ್‌ ಬಿಕ್ಕಟ್ಟಿನ ಸಮಯದಲ್ಲಿ ಭಾರತ ಬಲವಾಗಿ ಬೆಂಬಲಿಸುವಂತೆ ಕೋರುತ್ತೇವೆ.”

“ಪ್ರಧಾನಿ ಮೋದಿ ವಿಶ್ವದ ಅತ್ಯಂತ ಶಕ್ತಿಶಾಲಿ ಹಾಗೂ ಗೌರವಾನ್ವಿತ ನಾಯಕರಲ್ಲಿ ಒಬ್ಬರು. ಈ ವೇಳೆ ಭಾರತ ಜಾಗತಿಕವಾಗಿ ತನ್ನ ಪಾತ್ರವಹಿಸಿಕೊಳ್ಳಬೇಕು ಎಂದು ನಾವು ಮನವಿ ಮಾಡಿಕೊಳ್ಳುತ್ತೇವೆ” ಎಂದರು.

ಇಂದು ರಷ್ಯಾ ಉಕ್ರೇನ್‌ ಮೇಲೆ ಯುದ್ಧ ನಡೆಸುವುದಾಗಿ ಘೊಷಿಸಿದ್ದು, ಈವರೆಗೆ 40ಕ್ಕೂ ಹೆಚ್ಚು ಉಕ್ರೇನ್‌ ಸೈನಿಕರು ಹಾಗೂ 10 ಮಂದಿ ನಾಗರಿಕರು ರಷ್ಯಾದ ದಾಳಿಗೆ ಮೃತಪಟ್ಟಿದ್ದಾರೆ.

Sneha Gowda

Recent Posts

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

4 mins ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

33 mins ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

1 hour ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

1 hour ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

2 hours ago

ಟ್ರಾಫಿಕ್‌ ನಡುವೆ ಮೀಟಿಂಗ್‌ ಅಟೆಂಡ್‌ ಮಾಡಿದ ಮಹಿಳೆ

ವಾಹನದಟ್ಟಣೆಗೆ ಹೆಸರಾಗಿರುವ ರಾಜ್ಯರಾಜಧಾನಿಯಲ್ಲಿ ಮಹಿಳೆಯೊಬ್ಬರು ಟ್ರಾಫಿಕ್‌ ನಡುವೆಯೇ ಮೀಟಿಂಗ್‌ನಲ್ಲಿ ಪಾಲ್ಗೊಂಡು ಸುದ್ದಿಯಾಗಿದ್ದಾರೆ.

2 hours ago