News Karnataka Kannada
Monday, April 29 2024
ವಿದೇಶ

ಉಗ್ರರ ವಿರುದ್ಧ ಪ್ರತೀಕಾರ ಬೈಡೆನ್ ಪ್ರತಿಜ್ಞೆ

Joe Biden 20082021
Photo Credit :

ಕಾಬೂಲ್, ;ಅಮೆರಿಕಾ ಸೈನಿಕರನ್ನು ಹತ್ಯೆ ಮಾಡಿರುವವರನ್ನು ನಾವೆಂದೆಂದೂ ಕ್ಷಮಿಸುವುದಿಲ್ಲ. ಬಾಂಬ್ ದಾಳಿಯನ್ನು ಮರೆಯುವುದೂ ಇಲ್ಲ. ಸೈನಿಕರ ಹತ್ಯೆಗೆ ಪ್ರತೀಕಾರವಾಗಿ ನಿಮ್ಮನ್ನು ಬೇಟೆಯಾಡಿ ಬುದ್ಧಿ ಕಲಿಸುತ್ತೇವೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರು ಪ್ರತಿಜ್ಞೆ ಮಾಡಿದ್ದಾರೆ.
ಕಾಬೂಲ್‌ನಲ್ಲಿ ನಿನ್ನೆ ನಡೆದ ಬಾಂಬ್ ಸ್ಫೋಟದಲ್ಲಿ ಅಮೆರಿಕಾದ 13 ಮಂದಿ ಸೈನಿಕರು ಸೇರಿದಂತೆ 75ಕ್ಕೂ ಹೆಚ್ಚು ಮಂದಿ ನಾಗರೀಕರು ಮೃತಪಟ್ಟಿರುವ ಘಟನೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಬೈಡನ್ ಉಗ್ರರಿಗೆ ಎಚ್ಚರಿಕೆ ನೀಡಿದ್ದಾರೆ.
ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ಸೂತ್ರ ಹಿಡಿಯುತ್ತಿದ್ದಂತೆ ಉಗ್ರರರು ಅಟ್ಟಹಾಸ ನಡೆಸಿ ಆತ್ಮಹತ್ಯೆ ಬಾಂಬ್ ದಾಳಿ ನಡೆಸಿರುವುದನ್ನು ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳು ಖಂಡಿಸಿವೆ.
ಈ ಭಯೋತ್ಪಾದಕ ಕೃತ್ಯಕ್ಕೆ ಅಮೆರಿಕಾ ಭಯಪಡುವುದಿಲ್ಲ. ಉಗ್ರರಿಗೆ ತಕ್ಕ ಶಾಸ್ತಿ ಮಾಡುವವರೆಗೂ ನಾವು ವಿರಮಿಸುವುದಿಲ್ಲ. ಆಫ್ಘಾನ್‌ನಲ್ಲಿ ನೆಲಸಿರುವ ಅಮೆರಿಕನ್ನರನ್ನು ತೆರವುಗೊಳಿಸಿ ಸುರಕ್ಷಿತವಾಗಿ ಕರೆ ತರಲಾಗುವುದು ಎಂದು ಬೈಡನ್ ಹೇಳಿದ್ದಾರೆ.ಅಮೆರಿಕಾದ ಶ್ವೇತಭವನದಲ್ಲಿ ಭಾವನಾತ್ಮಕವಾಗಿ ಮಾತನಾಡಿದ ಅವರು ಹತ್ಯೆಯಾದ ಅಮೆರಿಕಾದ ಸೈನಿಕರು ನಿಜವಾದ ಹೀರೋಗಳು ಎಂದು ಶ್ಲಾಘಿಸಿ ಕಾಬೂಲ್‌ನಲ್ಲಿ ಸಿಲುಕಿರುವ ಅಮೆರಿಕನ್ನರನ್ನು ಸ್ಥಳಾಂತರಿಸುವ ಕಾರ್ಯ ಆ. 31 ರವರೆಗೂ ನಡೆಯಲಿದೆ ಎಂದವರು ಹೇಳಿದರು. ತಾಲಿಬಾನಿಗಳ ನಿಯಂತ್ರಣದಲ್ಲಿರುವ ಆಫ್ಘಾನಿಸ್ತಾನದಲ್ಲಿ ಇನ್ನೂ ಸುಮಾರು 1,500 ಅಮೆರಿಕನ್ನರಿದ್ದು, ಆತ್ಮಹತ್ಯಾ ಬಾಂಬ್ ದಾಳಿಯ ಬೆದರಿಕೆಯ ನಡುವೆಯೂ ಕಳೆದ 24 ಗಂಟೆಯ ಅವಧಿಯಲ್ಲಿ ಸುಮಾರು 13,400 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು