ವಿದೇಶ

ಉತ್ತರ ಕೊರಿಯಾದಿಂದ ದೂರಗಾಮಿ ಕ್ರೂಸ್ ಕ್ಷಿಪಣಿ ಪ್ರಯೋಗ

ಉತ್ತರ ಕೊರಿಯಾ : ಉತ್ತರ ಕೊರಿಯಾವು ದೂರಗಾಮಿ ಕ್ರೂಸ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದೆ. ಅಮೆರಿಕ ವಿರುದ್ಧ ದೀರ್ಘಕಾಲದಿಂದ ಸಂಘರ್ಷದಲ್ಲಿರುವ ಉತ್ತರ ಕೊರಿಯಾಗೆ ತನ್ನ ಅಣ್ವಸ್ತ್ರ ಬಲ ಹೆಚ್ಚಿಸಿಕೊಳ್ಳಬೇಕಿತ್ತು. ಅದೇ ಭಾಗವಾಗಿ ಈ ಕ್ಷಿಪಣಿ ಪ್ರಯೋಗ ನಡೆಸಿ ಯಶಸ್ಸು ಗಳಿಸಿದೆ. ಕ್ಷಿಪಣಿ ಪರೀಕ್ಷೆಯೊಂದಿಗೆ ಉತ್ತರ ಕೊರಿಯಾ ಶಸ್ತ್ರಾಸ್ತ್ರ ತಂತ್ರಜ್ಞಾನದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಮತ್ತು ಭಾನುವಾರದ ನಡುವೆ ನಡೆಸಿರುವ ದೂರಗಾಮಿ ಕ್ರೂಸ್ ಕ್ಷಿಪಣಿ ಪರೀಕ್ಷೆ ಜಗತ್ತಿಗೆ ಸಡ್ಡು ಹೊಡೆದಿದೆ. ಈ ದೂರಗಾಮಿ ಕ್ರೂಸ್ ಕ್ಷಿಪಣಿಗಳು 1,500 ಕಿ.ಮೀ ದೂರದ ಶತ್ರು ನೆಲೆಗಳನ್ನು ಕ್ಷಣಾರ್ಧದಲ್ಲಿ ಧ್ವಂಸ ಮಾಡಬಲ್ಲದು. ಜಾಗತಿಕ ಮಟ್ಟದ ನಿರ್ಬಂಧ ಹಾಗೂ ತೀವ್ರ ಒತ್ತಡದ ನಡುವೆಯೂ ಅಣ್ವಸ್ತ್ರ ಹಾಗೂ ಖಂಡಾಂತರ ಕ್ಷಿಪಣಿಗಳ ಪ್ರಯೋಗ ನಡೆಸುತ್ತಲೇ ಬಂದಿರುವ ಉತ್ತರ ಕೊರಿಯಾ, ರಕ್ಷಣಾ ವಲಯದಲ್ಲಿ ಬಲವೃದ್ಧಿಸಿಕೊಳ್ಳುತ್ತಿದೆ.

Sneha Gowda

Recent Posts

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

12 mins ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

44 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

1 hour ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago