ಉತ್ತರ ಕೊರಿಯಾ : ಉತ್ತರ ಕೊರಿಯಾ ಮತ್ತೊಂದು ಮೈಲುಗಲ್ಲಿಗೆ ಸಾಕ್ಷಿಯಾಗಿದೆ. ಇಂದು ತನ್ನ ಪೂರ್ವ ಕರಾವಳಿಯಲ್ಲಿ ಎರಡು ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದೆ. ದಕ್ಷಿಣ ಕೊರಿಯಾದ ಜಂಟಿ ಮುಖ್ಯಸ್ಥರು ಈ ಬಗ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಉತ್ತರ ಕೊರಿಯಾದ ಮಧ್ಯಭಾಗದಿಂದ ಈ ಎರಡು ಕ್ಷಿಪಣಿಗಳು ಉಡಾಯಿಸಲಾಗಿದೆ. ಇವೆರಡೂ ಕೊರಿಯನ್ ಪರ್ಯಾಯ ದ್ವೀಪದ ಪೂರ್ವ ಕರಾವಳಿಯ ನೀರಿನ ಕಡೆಗೆ ಹಾರಿದವು ಎಂದು ತಿಳಿಸಿದ್ದಾರೆ. ಉತ್ತರ ಕೊರಿಯಾದ ಈ ಕ್ಷಿಪಣಿಗಳ ಉಡಾವಣೆಗಳ ಕುರಿತು ದಕ್ಷಿಣ ಕೊರಿಯಾ ಮತ್ತು ಅಮೆರಿಕ ಗುಪ್ತಚರ ಅಧಿಕಾರಿಗಳು ಪರಿಶೀಲನೆ ಹಾಗೂ ವಿಶ್ಲೇಷಣೆಯಲ್ಲಿ ತೊಡಗಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉತ್ತರ ಕೊರಿಯಾ ಮತ್ತೊಂದು ಮೈಲುಗಲ್ಲಿಗೆ ಸಾಕ್ಷಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.