News Karnataka Kannada
Monday, April 29 2024
ವಿದೇಶ

ಏಳನೇ ಬಾರಿ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ

Photo Credit :

ಏಳನೇ ಬಾರಿ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ

ಪಟ್ನಾ: ಜೆಡಿಯುನ ಹಿರಿಯ ನಾಯಕ ನಿತೀಶ್ ಕುಮಾರ್ ಅವರು ಏಳನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

69ರ ಹರೆಯದ ನಿತೀಶ್ ಕುಮಾರ್ ಅವರೊಂದಿಗೆ ಬಿಜೆಪಿಯ ಇಬ್ಬರು ಶಾಸಕರು ಉಪಮುಖ್ಯಮಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಸೋಮವಾರ ಸಂಜೆ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯಪಾಲರಾದ ಫಾಗೂ ಚೌಹಾಣ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. 2005ರಲ್ಲಿ ಮೊದಲ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್ ಅವರು ಇದರ ಬಳಿಕ ನಾಲ್ಕನೇ ಅವಧಿಗೆ ಮುಖ್ಯಮಂತ್ರಿಯಾಗಿ ಆಗಿರುವರು.

ಉಪಮುಖ್ಯಮಂತ್ರಿಗಳಾಗಿ ಬಿಜೆಪಿಯ ತಾರಕಿಶೋರ್ ಪ್ರಸಾದ್ ಮತ್ತು ರೇಣು ದೇವಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು