ದೆಹಲಿ : ಐಸಿಸಿ ಟೆಸ್ಟ್ ರ್ಯಾಂಕಿಂಗ್ ನ ಬ್ಯಾಟಿಂಗ್ ವಿಭಾಗದಲ್ಲಿ ಕೊಹ್ಲಿ 6 ನೇ ಸ್ಥಾನಕ್ಕೆ ಕುಸಿದಿದ್ದಾರೆ. ರೋಹಿತ್ ಶರ್ಮಾ ಟೆಸ್ಟ್ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಟೆಸ್ಟ್ ರ್ಯಾಂಕಿಂಗ್ ನಲ್ಲಿ ಶರ್ಮಾ 5ನೇ ಸ್ಥಾನಕ್ಕೇರಿದ್ದಾರೆ.
ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಇಂಗ್ಲೆಂಡ್ ನಾಯಕ ಜೋ ರೂಟ್ 916 ರೇಟಿಂಗ್ ಪಾಯಿಂಟ್ಗಳೊಂದಿಗೆ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಸ್ಟೀವ್ ಸ್ಮಿತ್ ಮೂರನೇ ಮತ್ತು ಮರ್ನಾಸ್ ಲ್ಯಾಬುಶೈನ್ ನಾಲ್ಕನೇ ಸ್ಥಾನದಲ್ಲಿದ್ದಾರೆ.