ನವದೆಹಲಿ: ಕಳೆದ 24 ಗಂಟೆಗಳಲ್ಲಿ 9 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೇಶದಾದ್ಯಂತ ದಾಖಲಾಗಿದ್ದು, ಕೊರೋನಾ ಸೋಂಕಿತರ ಸಂಖ್ಯೆಯು 2.36 ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 9887 ಕೊರೊನಾದ ಹೊಸ ಪ್ರಕರಣಗಳು ದಾಖಲಾಗಿದೆ. ಇದರಿಂದ ಕೊರೋನಾ ಸೋಂಕಿತರ ಸಂಖ್ಯೆಯು 2,36,657 ಆಗಿದೆ ಮತ್ತು 115942 ಪ್ರಕರಣಗಳು ಸಕ್ರಿಯವಾಗಿದೆ. 114,073 ಮಂದಿ ಇದುವರೆಗೆ ಗುಣಮುಖರಾಗಿರುವರು ಮತ್ತು 6348 ಮಂದಿ ಸೋಂಕಿನಿಂದ ಮೃತಪಟ್ಟಿರುವರು.
ಮಹಾರಾಷ್ಟ್ರವು ಕೊರೋನಾ ಹಾಟ್ ಸ್ಪಾಟ್ ಆಗಿದ್ದು, ಇಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯು 80,229ಕ್ಕೆ ಏರಿಕೆ ಆಗಿದೆ. 2700 ಮಂದಿ ಇದುವರೆಗೆ ಮೃತಪಟ್ಟಿದ್ದಾರೆ.