Categories: ವಿದೇಶ

ಒಲಿಂಪಿಕ್ಸ್‌ ನಲ್ಲಿ ಒಟ್ಟು 458 ಜನರಿಗೆ ಕೋವಿಡ್‌ ಸೋಂಕು

ಟೋಕಿಯೊ: ಒಲಿಂಪಿಕ್ಸ್‌ಗೆ ಕ್ರೀಡಾ ಕೂಟ ಮುಕ್ತಾಯವಾಗಿದ್ದು ಸೋಮವಾರ 28 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಲಿಂಪಿಕ್ಸ್‌ನಲ್ಲಿ ಭಾಗಿಯಾದವರಲ್ಲಿ ಕಾಣಿಸಿಕೊಂಡ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 458 ಆಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಸೋಂಕು ಕಾಣಿಸಿಕೊಂಡವರಲ್ಲಿ 13 ಮಂದಿ ಗುತ್ತಿಗೆದಾರರು ಆಗಿದ್ದು ಆರು ಮಂದಿ ಇತರ ಸಿಬ್ಬಂದಿ. ಆರು ಮಂದಿ ಸ್ವಯಂಸೇವಕರು, ಇಬ್ಬರು ಉದ್ಯೋಗಿ ಮತ್ತು ಒಬ್ಬರು ಮಾಧ್ಯಮ ಕಾರ್ಯಕರ್ತ. ಈ ಪೈಕಿ 21 ಮಂದಿ ಜಪಾನ್‌ ನಿವಾಸಿಗಳು ಎಂದು ಆಯೋಜಕರು ವಿವರಿಸಿದ್ದಾರೆ.ಜನತೆಗೆ ಧನ್ಯವಾದ ಹೇಳಿದ ಪ್ರಧಾನಿ: ಕೋವಿಡ್ ಆತಂಕದ ನಡುವೆಯೂ ಒಲಿಂಪಿಕ್ ಕೂಟವನ್ನು ಸುಸೂತ್ರವಾಗಿ ಆಯೋಜಿಸಲು ನೆರವಾದ ಜನರಿಗೆ ಪ್ರಧಾನಿ ಯೊಶಿಹಿಡೆ ಸುಗಾ ಧನ್ಯವಾದ ಅರ್ಪಿಸಿದ್ದಾರೆ. ದಾಖಲೆಯ 58 ಪದಕಗಳನ್ನು ಗೆದ್ದ ಜಪಾನ್‌ನ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದ ಅವರು ‘ಕೆಲವರು ಪದಕ ಗೆದ್ದಿದ್ದಾರೆ. ಕೆಲವರು ವಿಫಲರಾಗಿದ್ದಾರೆ. ಆದರೆ ಎಲ್ಲರೂ ಅಮೋಘ ಸಾಮರ್ಥ್ಯ ತೋರಿ ಮನ ಗೆದ್ದಿದ್ದಾರೆ’ ಎಂದರು. ಕೋವಿಡ್‌ ಭಿತಿಯ ನಡುವೆಯೂ ಕ್ರೀಡಾ ಕೂಟ ಯಶಸ್ವಿ ಆಗಿದೆ ಎಂದು ಅವರು ಹೇಳಿದರು.

Indresh KC

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

8 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

31 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago