News Karnataka Kannada
Thursday, May 02 2024
ವಿದೇಶ

ಒಲಿಂಪಿಕ್ಸ್‌ ನಲ್ಲಿ ಬೆಳ್ಳಿ ಗೆದ್ದ ಕುಸ್ತಿ ಪಟು ರವಿ ದಹಿಯಾ

Ravi Kumar
Photo Credit :

ಟೋಕಿಯೋ: ಭಾರತದ ಹೆಮ್ಮೆಯ ಕುಸ್ತಿ ಪಟು ರವಿ ದಹಿಯಾ ಅವರು ಕುಸ್ತಿಯಲ್ಲಿ ಬೆಳ್ಳಿ ಪದಕ ಗೆದ್ದು ದೇಶದ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಒಲಿಂಪಿಕ್ಸ್ ಕುಸ್ತಿಯ ಪುರುಷರ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ 23 ವರ್ಷದ ರವಿ ದಹಿಯಾ ಬೆಳ್ಳಿಯನ್ನು ಗೆದ್ದಿದ್ದು ಇದರಿಂದ ಒಲಿಂಪಿಕ್ಸ್ ನಲ್ಲಿ ಭಾರತ ಎರಡನೇ ಬೆಳ್ಳಿ ಪದಕವನ್ನು ಗೆದ್ದಂತಾಗಿದೆ.
2 ಬಾರಿ ವಿಶ್ವಚಾಂಪಿಯನ್ ರಷ್ಯಾದ ಚೌರ್ ಉಗುವೆವ್ ವಿರುದ್ಧ 7-4 ಅಂಕಗಳಿಂದ ರವಿ ದಹಿಯಾ ಸೋತು ಎರಡನೇ ಸ್ಥಾನವನ್ನು ಪಡೆದರು. ಉಗುವೆವ್ ಸತತ 16 ಪಂದ್ಯಗಳನ್ನು ಗೆದ್ದು ಒಲಿಂಪಿಕ್ಸ್ ಪ್ರವೇಶಿಸಿದ್ದರು.
ಸೆಮಿಫೈನಲ್‍ನಲ್ಲಿ ಕಝಖಿಸ್ತಾನದ ನುರಿಸ್ಲಾಮ್ ಸನಯೆವ್ ವಿರುದ್ಧ ಆರಂಭಿಕ ಹಿನ್ನಡೆ ಅನುಭವಿಸಿದರೂ ಭರ್ಜರಿ ಕಮ್‍ಬ್ಯಾಕ್ ಮಾಡುವ ಮೂಲಕ ರವಿ ದಹಿಯಾ ರೋಚಕ ಗೆಲುವಿನೊಂದಿಗೆ ಫೈನಲ್ ಅರ್ಹತೆ ಪಡೆದುಕೊಂಡಿದ್ದರು.
ಹರಿಯಾಣದ ಸೋನಿಪತ್ ಜಿಲ್ಲೆಯ ನಹ್ರಿ ಗ್ರಾಮದಲ್ಲಿ ಜನಿಸಿದ ರವಿ ದಹಿಯಾ ಈ ಹಿಂದೆ 2019ರ ವಿಶ್ವ ಚಾಂಪಿಯನ್‍ಷಿಪ್‍ನ 57 ಕೆಜಿ ವಿಭಾಗದಲ್ಲಿ ಕಂಚು, 2020ರ ಏಷ್ಯನ್ ಚಾಂಪಿಯನ್‍ಷಿಪ್‍ನಲ್ಲಿ ಚಿನ್ನ, 2021ರ ಏಷ್ಯನ್ ಚಾಂಪಿಯನ್‍ಷಿಪ್‍ನಲ್ಲಿ ಸ್ವರ್ಣ, 2018ರ ಅಂಡರ್ 23 ಚಾಂಪಿಯನ್‍ಷಿಪ್‍ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದರು.
2012ರ ಲಂಡನ್ ಒಲಿಂಪಿಕ್ಸ್‍ನಲ್ಲಿ ಸುಶೀಲ್ ಕುಮಾರ್ ಭಾರತಕ್ಕೆ ಬೆಳ್ಳಿ ಗೆದ್ದುಕೊಟ್ಟಿದ್ದರು. ಅದೇ ವರ್ಷ ಯೋಗೀಶ್ವರ್ ದತ್ ಕಂಚಿನ ಪದಕ ಗೆದ್ದರೆ, 2016ರ ರಿಯೊ ಒಲಿಂಪಿಕ್ಸ್‍ನಲ್ಲಿ ಸಾಕ್ಷಿ ಮಲಿಕ್ ಕಂಚು ಗೆದ್ದಿದ್ದರು. 1952ರಲ್ಲಿ ಕೆ.ಡಿ ಜಾಧವ್ ಕಂಚಿನ ಪದಕ ಗೆದ್ದಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು