News Karnataka Kannada
Thursday, May 09 2024
ವಿದೇಶ

ಕಾಬೂಲ್‌ ವಿಮಾನ ನಿಲ್ದಾಣದ ಹೊರಗೆ ಆತ್ಮಾಹುತಿ ಧಾಳಿಯ ಬಾಂಬ್‌ ಸ್ಪೋಟ ; 15 ಜನರ ಸಾವು

Kabul Airport
Photo Credit :

 

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಒಂದು ಕಡೆ ತಾಲಿಬಾನಿಗಳ ಹಿಂಸೆ ನಡುವೆ, ಕಾಬೂಲ್ ವಿಮಾನ ನಿಲ್ದಾಣದ ಪ್ರವೇಶದ್ವಾರವೊಂದರಲ್ಲಿ ಆತ್ಮಾಹುತಿ ದಾಳಿ ಸಂಭವಿಸಿದೆ.
ಲಭ್ಯವಾಗಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಸ್ಫೋಟದಿಂದಾಗಿ 15  ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, 25 ಕ್ಕೂ ಹೆಚ್ಚು ಅಮೆರಿಕದ ಯೋಧರು ಸೇರಿದಂತೆ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾಗಿ ವರದಿಯಾಗಿದೆ. ಕಾಬೂಲ್​ ಏರ್​ಪೋರ್ಟ್ ಬಳಿ ಸ್ಫೋಟವಾಗುತ್ತಿದ್ದಂತೆ ಈ ಸ್ಥಳದಿಂದ ಸ್ವಲ್ಪ ದೂರದಲ್ಲಿರುವ ಬರೋನ್ ಹೋಟೆಲ್​ ಬಳಿ ಮತ್ತೊಂದು ಸ್ಫೋಟ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪೆಂಟಗಾನ್​​ ವಕ್ತಾರ್​ ಜಾನ್​ ಕಿರ್ಬೈ ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಕಾಬೂಲ್​ ಏರ್​ಪೋರ್ಟ್​​​ ಬಳಿ ಬಾಂಬ್​ ಸ್ಫೋಟಗೊಂಡಿರುವುದು ನಿಜ ಎಂದು ಹೇಳಿದ್ದಾರೆ. ಬಾಂಬ್​ ಸ್ಫೋಟಗೊಳ್ಳುತ್ತಿದ್ದಂತೆ, ಈ ಸ್ಥಳದಲ್ಲಿ ಫೈರಿಂಗ್ ಕೂಡ ನಡೆಸಲಾಗಿದೆ. ಇದರಿಂದ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.ತಾಲಿಬಾನಿ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಬ್ರಿಟನ್ ಎಚ್ಚರಿಕೆ ನೀಡಿತ್ತು. ಅಮೆರಿಕ ಕೂಡ ಕಾಬೂಲ್ ಏರ್‍ಪೋರ್ಟ್‍ನಿಂದ ದೂರ ಇರುವಂತೆ ಎಚ್ಚರಿಸಿತ್ತು. ಈ ಬೆನ್ನಲ್ಲೇ ಆತ್ಮಾಹುತಿ ದಾಳಿ ನಡೆದಿದೆ.
ಯಾರೂ ದೇಶಬಿಟ್ಟು ಹೋಗಬೇಡಿ. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ರಚನೆಯಾಗಲಿದೆ ಎಂದು ತಾಲಿಬಾನಿಗಳು ಆಫ್ಘನ್ ಪ್ರಜೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಸಾವಿರಾರು ಜನರು ವಿದೇಶಕ್ಕೆ ತೆರಳಲು ಕಾಬೂಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಿರುವ ಹಿನ್ನೆಲೆಯಲ್ಲಿ ಭಯ ಹುಟ್ಟಿಸಲು ಉಗ್ರರು ಈ ಬಾಂಬ್ ದಾಳಿ ನಡೆಸಿದ್ದಾರೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ದಾಳಿ ಆಗಿರುವುದನ್ನು ಅಮೆರಿಕ ದೃಢಪಡಿಸಿದೆ. ಈ ಸಮಯದಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ ಎಂದು ಪೆಂಟಗನ್ ತಿಳಿಸಿದೆ. ಅಮೇರಿಕಾಸ ಯೋಧರನ್ನು ಗುರಿಯಾಗಿಸಿ ಈ ಧಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು