ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಅಧಿಕೃತವಾಗಿ ಅಧಿಕಾರಕ್ಕೆ ಏರಲು ಸಕಲ ಸಿದ್ಧತೆ ಮಾಡಿಕೊಂಡಿರುವ ತಾಲಿಬಾನ್ ಇದೀಗ ಕಾಬೂಲ ಏರ್ಪೋರ್ಟ್ ಹೆಸರನ್ನು ಬದಲಾವಣೆ ಮಾಡಲಾಗಿದೆ. ಈ ಮೊದಲು ಕಾಬೂಲ್ ವಿಮಾನ ನಿಲ್ದಾಣಕ್ಕೆ ಇದ್ದ ‘ಹಮೀದ್ ಕರ್ಜಾಯ್’ ಹೆಸರನ್ನು ಬದಲಿಸಿ ಅದನ್ನು ‘ಕಾಬೂಲ್ ಇಂಟರ್ನ್ಯಾಷನಲ್ ಏರ್ಪೋರ್ಟ್’ ಎಂದು ನಾಮಕರಣ ಮಾಡಿದೆ.
ಅಫ್ಘಾನಿಸ್ತಾನದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಹವಣಿಸುತ್ತಿರುವ ತಾಲಿಬಾನ್ ಸೆ.11ರಂದು ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಈ ಹಿಂದೆ ಘೋಷಿಸಿತ್ತು. ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ ಅವಳಿ ಕಟ್ಟಡಗಳ ಮೇಲೆ ಅಲ್ ಖೈದಾ ಉಗ್ರರು ದಾಳಿ ನಡೆಸಿದದಿನವನ್ನು ಸಂಸ್ಮರಿಸುವ ನಿಟ್ಟಿನಲ್ಲಿ ತಾಲಿಬಾನಿಗಳು ಇಂದು ಅಫ್ಘಾನಿಸ್ತಾನದಲ್ಲಿ ತಮ್ಮ ತಾಲಿಬಾನ್ ಸರ್ಕಾರ ಉದ್ಘಾಟನೆ ಕಾರ್ಯಕ್ರಮ ನಡೆಸುವ ಉದ್ದೇಶ ಹೊಂದಿದ್ದರು. ಆದರೆ ಅದೀಗ ಪೋಸ್ಟ್ಪೋನ್ ಆಗಿದೆ ಎಂದು ವರದಿಗಳು ತಿಳಿಸಿವೆ.