ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ.‘ದಕ್ಷಿಣ ಕಾಶ್ಮೀರದ ಕನಿಗಾಮ್ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ. ಈ ವೇಳೆ ಮೂವರು ಉಗ್ರರು ಹತರಾಗಿದ್ದಾರೆ. ಉಗ್ರ ಸಂಘಟನೆಯ ಸದಸ್ಯ ತೌಫಿಕ್ ಅಹಮದ್ ಶರಣಾಗಿದ್ದಾನೆ. ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.ಸದ್ಯ ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.