Categories: ವಿದೇಶ

ಕೊವಿಡ್ ದೃಢಪಟ್ಟ ಗಂಟೆಯೊಳಗೆ ಐಸೋಲೇಶನ್ ಕಿಟ್ ಮನೆ ಬಾಗಿಲಿಗೆ; ರಾಜ್ಯ ಸರ್ಕಾರದ ನಿರ್ಧಾರ

ಬೆಂಗಳೂರು: ಕೊವಿಡ್ ಸೋಂಕು ದೃಢಪಟ್ಟ 1 ಗಂಟೆಯೊಳಗೆ ಹೋಂ ಐಸೋಲೇಷನ್ ಕಿಟ್​ನ್ನು ಹೋಂ ಐಸೋಲೇಷನ್​ ಆದವರಿಗೆ ತಲುಪಿಸಲು ಕರ್ನಾಟಕ ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗಾಗಿ 5 ಲಕ್ಷ ಮೆಡಿಕಲ್​ ಕಿಟ್ ಖರೀದಿಗೆ ಸರ್ಕಾರ ಆದೇಶಿಸಿದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಕಿಟ್‌ ಖರೀದಿಸಲು ನಿರ್ಧರಿಸಲಾಗಿದೆ. ಕಿಟ್‌ನಲ್ಲಿ ರೋಗ ಮತ್ತು ಸೋಂಕು ನಿರೋಧಕ ಔಷಧಗಳು, ವೈರಸ್‌ ನಿರೋಧಕ, ವಿಟಮಿನ್‌ ಮಾತ್ರೆ ಸೇರಿ ಅಗತ್ಯ ಔಷಧ ವಸ್ತುಗಳು ಇರಲಿವೆ.
ಸರ್ಕಾರ 10 ದಿನಕ್ಕೆ ಆಗುವಷ್ಟು ಔಷಧಿಯುಳ್ಳ ಕಿಟ್‌ ನೀಡಲಿದ್ದು, ಮೇ 15ರಿಂದಲೇ ಮೆಡಿಕಲ್​ ಕಿಟ್​ಗಳ ಹಂಚಿಕೆ ನಡೆಸಲು ನಿರ್ಧರಿಸಲಾಗಿದೆ. ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳು ಸೇರಿ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಮೆಡಿಕಲ್​ ಕಿಟ್​ಗಳು ಲಭ್ಯವಿರಲಿವೆ.ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾಣಿಸಿಕೊಳ್ಳಬಹುದಾದ ಕೊವಿಡ್ 3ನೇ ಅಲೆ ತಡೆಯಲು ಡಾ.ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ವಿಧಾನಸೌಧದಲ್ಲಿ ತಮ್ಮ ಸಚಿವ ಸಂಪುಟದ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್.ಅಶೋಕ್, ಅರವಿಂದ ಲಿಂಬಾವಳಿ,ಡಾ.ಸುಧಾಕರ್ ಅವರ ಜತೆ ರಾಜ್ಯದಲ್ಲಿ ಕೊವಿಡ್ ತಡೆ ಮತ್ತು ನಿರ್ವಹಣೆ ಕುರಿತ ಸುದ್ದಿಗೋಷ್ಠಿಯಲ್ಲಿ ಹಲವು ಮಾಹಿತಿಗಳನ್ನು ತೆರೆದಿಟ್ಟರು.18-44ವರ್ಷದೊಳಗಿನವರಿಗೆ ಲಸಿಕೆ ವಿತರಣೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದ್ದೇವೆ. ಅಗತ್ಯ ಪ್ರಮಾಣದ ಲಸಿಕೆ ಖರೀದಿಸಲು ಜಾಗತಿಕ ಟೆಂಡರ್ ಕರೆದಿದ್ದೇವೆ
ರೆಮ್​ಡಿಸಿವಿರ್ ಪೂರೈಸದ ಕಂಪನಿಗಳಿಗೆ ನೋಟಿಸ್ ನೀಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಬಳಕೆಯಾಗದೆ ಉಳಿದ ರೆಮ್​ಡಿಸಿವಿರ್ ಪೂರೈಕೆಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ಅವರು ತಿಳಿಸಿದರು. ಕೊರೊನಾ ಹೆಚ್ಚಾಗಿದ್ದರಿಂದ ಸೋಂಕಿತರ ಜೀವ ಮುಖ್ಯ. ಸದ್ಯ ಸೋಂಕಿತರ ಜೀವ ಉಳಿಸಲು ಆದ್ಯತೆ ನೀಡುತ್ತೇವೆ. ಜನರ ಸಂಕಷ್ಟ ಅರಿತು ಮುಂದಿನ ದಿನಗಳಲ್ಲಿ ಪ್ಯಾಕೇಜ್​ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ತಿಳಿಸಿದರು.
ಕೊರೊನಾ ವಿರುದ್ಧ ಹೋರಾಡುತ್ತಿರುವ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಕೊವಿಡ್ 1ನೇ ಅಲೆ ಮತ್ತು 2ನೇ ಅಲೆ ನಡುವೆ ತಯಾರಿಗೆ 5ರಿಂದ6 ತಿಂಗಳು ಸಮಯವಿತ್ತು. ಆಗ ಸರಿಯಾದ ಸಿದ್ಧತೆ ಆಗಿರಲಿಲ್ಲ. ಆದರೆ ಈಗ ಕರ್ನಾಟಕ ದೇಶದಲ್ಲೇ ಕೊವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದೆ. ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ಶೇ.50ರಷ್ಟು ಐಸಿಯು ಬೆಡ್​ಗಳಿವೆ ಇವೆ. ಈ ಮುನ್ನ ಯಾವುದೇ ತಾಲೂಕಾ ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ಇರಲಿಲ್ಲ ಎಂದು ವಿವರಿಸಿದರು.

Desk

Recent Posts

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

12 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

14 mins ago

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

35 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

48 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

1 hour ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

1 hour ago