News Karnataka Kannada
Saturday, May 11 2024
ವಿದೇಶ

ಕೋವಿಡ್‌ ಮೂಲ ಮುಚ್ಚಿಟ್ಟ ಚೀನಾ: ಕಿಡಿಕಾರಿದ ಜೋ ಬೈಡನ್

Joe Biden 20082021
Photo Credit :

ವಾಷಿಂಗ್ಟನ್‌: ಜಗತ್ತನೇ ಕಾಡಿದ ಕೊರೊನಾ ವೈರಸ್ ಮೂಲದ ಕುರಿತ ಗಂಭೀರ ವಿಚಾರವನ್ನು ಚೀನಾ ಮುಚ್ಚಿಟ್ಟಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಗಂಭೀರ ಆರೋಪ ಮಾಡಿದ್ದಾರೆ.

ಕೋವಿಡ್‌–19ರ ಉಗಮದ ಬಗೆಗಿನ ನಿರ್ಣಾಯಕ ಮಾಹಿತಿಯನ್ನು ಚೀನಾ ಮುಚ್ಚಿಡುತ್ತಿದೆ. ಚೀನಾದ ಬಳಿ ಕೋವಿಡ್‌ ಉಗಮದ ಬಗ್ಗೆ ನಿರ್ಣಾಯಕ ಮಾಹಿತಿ ಲಭ್ಯವಿದೆ. ಆದರೂ, ಆರಂಭದಿಂದಲೇ ಚೀನಾದ ಸರ್ಕಾರಿ ಅಧಿಕಾರಿಗಳು ಅಂತರರಾಷ್ಟ್ರೀಯ ತನಿಖಾಧಿಕಾರಿಗಳು ಮತ್ತು ಜಾಗತಿಕ ಸಾರ್ವಜನಿಕ ಆರೋಗ್ಯ ಸಮುದಾಯದ ಸದಸ್ಯರುಗಳಿಗೆ ಆ ಮಾಹಿತಿ ಸಿಗದಂತೆ ತಡೆಯುತ್ತಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೋವಿಡ್‌ನಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಿದ್ದರೂ ಚೀನಾ, ಪಾರದರ್ಶಕತೆಯನ್ನು ತಿರಸ್ಕರಿಸುತ್ತಿದೆ. ಮಾಹಿತಿಯನ್ನು ತಡೆ ಹಿಡಿಯುತ್ತಿದೆ. ಕೊರೊನಾ ಉಗಮಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನೀಡುವಂತೆ ಮತ್ತು ವಿಶ್ವ ಆರೋಗ್ಯ ಸಂಸ್ಥೆಗೆ ಸಹಕರಿಸುವಂತೆ ಮಿತ್ರ ರಾಷ್ಟ್ರಗಳೊಂದಿಗೆ ಸೇರಿ ಚೀನಾದ ಮೇಲೆ ಅಮೆರಿಕ ಒತ್ತಡ ಹೇರಲಿದೆ ಎಂದು ಬೈಡನ್ ಹೇಳಿದ್ದಾರೆ.

ಇನ್ನು ‘ಗುಪ್ತಚರ ಸಮುದಾಯ ಮತ್ತು ಜಾಗತಿಕ ವಿಜ್ಞಾನಿಗಳ ವಿಶ್ಲೇಷಣೆಯಲ್ಲಿ ಆರಂಭಿಕ ಕೋವಿಡ್‌–19 ಪ್ರಕರಣಗಳ ವೈದ್ಯಕೀಯ ಮಾದರಿಗಳು ಮತ್ತು ಸಾಂಕ್ರಾಮಿಕ ರೋಗಶಾಸ್ತ್ರದ ಮಾಹಿತಿಯ ಕೊರತೆಯಿದೆ’ ಎಂದು ಗುಪ್ತಚರ ವರದಿಯ ವರ್ಗೀಕರಿಸದ ಸಾರಾಂಶದಲ್ಲಿ ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು