News Karnataka Kannada
Sunday, April 28 2024
ವಿದೇಶ

ಕೋವಿಡ್-19 ಲಸಿಕೆ ಹಾಕಿಸಿಕೊಂಡ ಪ್ರಧಾನಿ ಮೋದಿ

Photo Credit :

ಕೋವಿಡ್-19 ಲಸಿಕೆ ಹಾಕಿಸಿಕೊಂಡ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಹಂತದ ಕೋವಿಡ್-19 ಲಸಿಕೆ ಕಾರ್ಯಕ್ರಮದ ವೇಳೆ ಸ್ವತಃ ಲಸಿಕೆ ಹಾಕಿಸಿಕೊಂಡಿದ್ದು, ಜನರು ಕೂಡ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿರುವರು.

ಸೋಮವಾರ(ಮಾ.1) ಬೆಳಗ್ಗೆ ಅವರು ಏಮ್ಸ್ ಆಸ್ಪತ್ರೆಗೆ ತೆರಳಿ ಅಲ್ಲಿ ಕೋವಿಡ್-19 ಲಸಿಕೆ ಹಾಕಿಸಿಕೊಂಡರು.

ವೈದ್ಯರು ಮತ್ತು ವಿಜ್ಞಾನಿಗಳು ಕೋವಿಡ್-19 ವಿರುದ್ಧ ಹೋರಾಡಲು ತುಂಬಾ ಶ್ರಮ ಪಟ್ಟಿದ್ದಾರೆ. ಲಸಿಕೆ ಪಡೆಯಲು ಯೋಗ್ಯರಾಗಿ ಇರುವವರು ಇದನ್ನು ಪಡೆಯಬೇಕು. ಜತೆಯಾಗಿ ನಾವೆಲ್ಲರೂ ಕೋವಿಡ್-19ನಿಂದ ಮುಕ್ತರಾಗೋಣ ಎಂದು ಟ್ವೀಟ್ ಮಾಡಿರುವರು.

ಎರಡನೇ ಹಂತದ ಲಸಿಕೆ ಕಾರ್ಯಕ್ರಮದ ವೇಳೆ 60ರ ಮೇಲ್ಪಟ್ಟವರಿಗೆ ಹಾಗೂ 40ರ ಹರೆಯದ ಮೇಲ್ಪಟ್ಟವರಿಗೆ ಯಾವುದೇ ಅನಾರೋಗ್ಯ ಸಮಸ್ಯೆಗಳು ಇದ್ದರೆ ಆಗ ಅವರಿಗೆ ಲಸಿಕೆ ನೀಡಲಾಗುತ್ತದೆ.

ಜನವರಿ 16ರಂದು ಮೊದಲ ಹಂತದ ಲಸಿಕೆ ಕಾರ್ಯಕ್ರಮವು ಆರಂಭವಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು