Categories: ವಿದೇಶ

ಚೀನಾದ ಶಿಯೋಮಿ ಕಂಪನಿಯ ರೂ.5,551 ಕೋಟಿ ಹಣ ಜಪ್ತಿ ಮಾಡಿದ ಈಡಿ

ಹೊಸದಿಲ್ಲಿ : ವಿದೇಶಿ ವಿನಿಮಯ ನಿಯಮ ಉಲ್ಲಂಘನೆ ಆರೋಪದಲ್ಲಿ ಚೀನಾ ಮೂಲದ ಸ್ಮಾರ್ಟ್‌ಫೋನ್‌ ದೈತ್ಯ ಶಿಯೋಮಿಗೆ (Xiaomi) ಗೆ ಸೇರಿದ ಸುಮಾರು ರೂ. 5000 ಕೋಟಿಗೂ ಅಧಿಕ ಹಣವನ್ನು ಜಾರಿ ನಿರ್ದೇಶನಾಲಯ (ಈಡಿ) ವಶಕ್ಕೆ ಪಡೆದಿದೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ, 1999 ರ ನಿಬಂಧನೆಗಳ ಅಡಿಯಲ್ಲಿ ಜಾರಿ ನಿರ್ದೇಶನಾಲಯವು ಕಂಪನಿಯ ಬ್ಯಾಂಕ್ ಖಾತೆಗಳಿಂದ ರೂ. 5,551.27 ಕೋಟಿಯನ್ನು ವಶಪಡಿಸಿಕೊಂಡಿದೆ.

ಈ ವರ್ಷದ ಫೆಬ್ರವರಿಯಲ್ಲಿ ಕಂಪನಿಯು ಮಾಡಿದ ಅಕ್ರಮ ಹಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ತನಿಖೆಯನ್ನು ಪ್ರಾರಂಭಿಸಿತ್ತು. ಕಂಪನಿಯು 2014 ರಲ್ಲಿ ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಮತ್ತು 2015 ರಲ್ಲಿ ಹಣವನ್ನು ರವಾನೆ ಮಾಡಲು ಪ್ರಾರಂಭಿಸಿತು.

ಭಾರತದಲ್ಲಿ ಸ್ಮಾರ್ಟ್‌ ಫೋನ್‌ ಮೂಲಕ ಮಾರುಕಟ್ಟೆ ಪ್ರವೇಶಿಸಿದ ಶಿಯೋಮಿ ವಿವಿಧ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಬಿಡಿ ವಸ್ತುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಮುಂಚೂನಿಯಲ್ಲಿದೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago