ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನದಲ್ಲಿ ಭದ್ರತಾ ಪಡೆಯು ಮೂವರು ಉಗ್ರರನ್ನು ಹೊಡೆದುರುಳಿಸಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿರುವರು.
ಶೋಪಿಯಾನ್ ಮತ್ತು ಬಡ್ಗಾಮ್ ಜಿಲ್ಲೆಗಳಲ್ಲಿ ಉಗ್ರರ ಮತ್ತು ಭದ್ರತಾ ಪಡೆಯ ಮಧ್ಯೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡರು. ಓರ್ವ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿರುವರು.