ನವದೆಹಲಿ: ಕಾಂಗ್ರೆಸ್ ಪಕ್ಷವು ಜೂನ್ ನಲ್ಲಿ ಹೊಸ ಚುನಾಯಿತ ಅಧ್ಯಕ್ಷರನ್ನು ಪಡೆಯಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದರು.
ಚುನಾವಣೆಯ ವೇಳಾಪಟ್ಟಿಯಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಪಕ್ಷ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿದರು.
ಪಕ್ಷ ಪ್ರಮುಖ ಹುದ್ದೆಗಳಲ್ಲಿ ದೊಡ್ಡ ಬದಲಾವಣೆಗಳು ಆಗಬೇಕಾಗಿದೆ ಮತ್ತು ಅಧ್ಯಕ್ಷರನ್ನು ಚುನಾವಣೆ ಮೂಲಕ ಆಯ್ಕೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿಗಳು, ಸಂಸದರು ಹಾಗೂ ಕಾರ್ಯಕಾರಿಣಿ ಸಮಿತಿ ಸದಸ್ಯರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದರು.