News Karnataka Kannada
Sunday, May 19 2024
ವಿದೇಶ

ಜೈಲಿನಿಂದ ಬಿಡುಗಡೆಯಾದ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್

Photo Credit :

ಜೈಲಿನಿಂದ ಬಿಡುಗಡೆಯಾದ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್

ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಬಿಡುಗಡೆಯಾಗಿದ್ದು, ಅವರ ಮಗಳು ಮರಿಯಂ ಮತ್ತು ಅಳಿಯ ಸಫ್ಡಾರ್ ಅವರನ್ನು ರಾವಲ್ಪಿಂಡಿಯ ಅಡಿಯಾಲಾ ಜೈಲಿನಿಂದ ಬುಧವಾರ ರಾತ್ರಿ ಬಿಡುಗಡೆ ಮಾಡಲಾಗಿದೆ.

ಈ ವೇಳೆ ಜೈಲಿನಾವರಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬಿಡುಗಡೆ ವೇಳೆ ಷರೀಫ್ ಸ್ವಾಗತಕ್ಕೆ ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್ ಪಕ್ಷದ ಹಿರಿಯ ನಾಯಕರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ಸೇರಿದ್ದರು.

ಬಿಡುಗಡೆಗೊಂಡ ಬಳಿಕ ಅವರು ಲಾಹೋರ್ ಗೆ ತೆರಳಿದ್ದಾರೆ. ಬುಧವಾರ ಇಸ್ಲಾಮಾಬಾದ್ ನ ಹೈಕೋರ್ಟ್ ಷರೀಫ್‌, ಮರಿಯಂ ಮತ್ತು ಸಫ್ದಾರ್‌ ಅವರಿಗೆ ನೀಡಲಾಗಿದ್ದ ಶಿಕ್ಷೆಯನ್ನು ರದ್ದುಪಡಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು