ತಮಿಳುನಾಡು: ಇಲ್ಲಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 10 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 18 ಮಂದಿಗೆ ಗಂಭಿರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಸಂಭವಿಸಿದೆ.
ತಿರುವನಂತಪುರಂನಿಂದ ವೆಲಂಕಣಿ ಕಡೆಗೆ ತೆರಳುತ್ತಿದ್ದ ಬಸ್ ಬಂಡೆಯೊಂದಕ್ಕೆ ಢಿಕ್ಕಿಯಾಗಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಪಘಾತಕ್ಕೀಡಾದ ಬಸ್ಸನ್ನು ಟೂರಿಸ್ಟ್ ಬಸ್ ಎಂದು ಹೇಳಲಾಗುತ್ತಿದೆ. ಬಂಡೆಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್ ಪಲ್ಟಿ ಹೊಡೆದಿದೆ. ಇದರ ಪರಿಣಾಮ ಬಸ್ ನಲ್ಲಿದ್ದ ಮೂವರು ಮಹಿಳೆಯರು, ಐವರು ಪುರುಷರು ಹಾಗೂ ಇಬ್ಬರು ಮಕ್ಕಳು ಸೇರಿದಂತೆ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೆ, 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.