Categories: ವಿದೇಶ

ತಾಲಿಬಾನಿಗಳ ಬೆಂಬಲಕ್ಕೆ ನಿಂತ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌

 

ಇಸ್ಲಾಮಾಬಾದ್: ಅಫ್ಘಾನಿಸ್ತಾನದಲ್ಲಿ ಅಮೇರಿಕಾದ ಪಡೆಗಳ ಹಿಂತೆಗೆತದ ನಂತರ ತಾಲಿಬಾನಿಗಳ ಅಟ್ಟಹಾಸ ಮಿತಿಮೀರಿದೆ. ಇವರ ಅತ್ಯಾಚಾರ ದೌರ್ಜನ್ಯಕ್ಕೆ ಕೊನೆಯೇ ಇಲ್ಲದಾಗಿದೆ. ಇದೀಗ ಅವರ ಪರವಾಗಿ ನಿಂತಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌, ತಾಲಿಬಾನಿಗಳೂ ಕೂಡ ಸಾಮಾನ್ಯ ನಾಗರೀಕರೇ, ಅವರೇನೂ ಉಗ್ರರಲ್ಲ ಎಂದು ಹೇಳಿಕೆ ನೀಡುವ ಮೂಲಕ ತಮ್ಮ ನಿಜ ಬಣ್ಣ ಬಯಲು ಮಾಡಿದ್ದಾರೆ.
ಇದು ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ನಡೆಸುತ್ತಿರೋ ಹಿಂಸಾಚಾರಕ್ಕೆ ಪಾಕಿಸ್ತಾನ ಪರೋಕ್ಷವಾಗಿ ಬೆಂಬಲಿಸುತ್ತಿದೆ ಎಂಬ ಆರೋಪಕ್ಕೆ ಪುಷ್ಟಿ ನೀಡಿದೆ. ಪಾಕಿಸ್ತಾನವು ತಾಲಿಬಾನಿಗಳಿಗೆ ರಕ್ಷಣೆ ನೀಡುತ್ತಿದೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, ಪಾಕಿಸ್ತಾನವು 30 ಲಕ್ಷ ಆಫ್ಘನ್​ ನಿರಾಶ್ರಿತರಿಗೆ ಆಶ್ರಯ ನೀಡುತ್ತಿದೆ. ಅದರಲ್ಲಿ ಹೆಚ್ಚಿನವರು ಪಶ್ತೂನ್​ ಹಾಗೂ ತಾಲಿಬಾನಿಗಳು. ಅವರೇನೂ ಉಗ್ರರಲ್ಲ, ಹೋರಾಟಗಾರರು. ಅವರಿಗೆ ಪಾಕಿಸ್ತಾನದಲ್ಲಿ 5 ಲಕ್ಷ ಶಿಬಿರಗಳ ವ್ಯವಸ್ಥೆ ಮಾಡಿದ್ದೇವೆ. ಇಂಥ ಹೋರಾಟಗಾರರನ್ನು ನಾವು ಹೇಗೆ ಹತ್ಯೆಗೈಯ್ಯುವುದು ಎಂದು ಪ್ರಶ್ನಿಸಿದ್ದಾರೆ.
ಗಡಿ ಭಾಗದಲ್ಲಿ ಮೂವತ್ತು ಲಕ್ಷ ನಿರಾಶ್ರಿತರು ಇದ್ದಾರೆ. ಅವರಲ್ಲಿ ತಾಲಿಬಾನಿಗಳೂ ಇದ್ದಾರೆ. ಆದರೆ ಅವರನ್ನು ನಾವು ಉಗ್ರರು ಎನ್ನಲಾಗದು. ಅವರ ಪೈಕಿ ಹೆಚ್ಚಿನವರು ಜನಸಾಮಾನ್ಯರು. ಉಗ್ರರು ಎನ್ನುವ ಕಾರಣಕ್ಕೆ ಅವರನ್ನು ಕೊಲ್ಲುವುದು ಸಾಧ್ಯವಿಲ್ಲ ಎಂದಿದ್ದಾರೆ. ಅಫ್ಘಾನಿಸ್ತಾನ ಸರ್ಕಾರದ ವಿರುದ್ಧದ ಹೋರಾಟದಲ್ಲಿ ತಾಲಿಬಾನ್‌ಗಳಿಗೆ ಮಿಲಿಟರಿ, ಆರ್ಥಿಕವಾಗಿ ಮತ್ತು ಗುಪ್ತಚರ ಮಾಹಿತಿಯೊಂದಿಗೆ ಪಾಕಿಸ್ತಾನ ಸಹಾಯ ಮಾಡಿದೆ ಎಂದು ಬಹಳ ಹಿಂದಿನಿಂದಲೂ ಅಫ್ಘಾನಿಸ್ಥಾನ ಆರೋಪಿಸುತ್ತಲೇ ಬಂದಿದೆ. ಆದರೆ ಎಂದಿನಂತೆ ಖಾನ್‌ ಈ ಆರೋಪಗಳನ್ನು ತಳ್ಳಿ ಹಾಕುತ್ತಲೇ ಬಂದಿದ್ದಾರೆ

Indresh KC

Recent Posts

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

14 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

28 mins ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

41 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

58 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

1 hour ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

2 hours ago