ವಿದೇಶ

ತಾಲಿಬಾನ್‌ ಸೃಷ್ಟಿಕರ್ತ ಪಾಕಿಸ್ಥಾನ ; ಸಂಜಯ್‌ ರಾವುತ್‌

ಮುಂಬೈ : ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿಗೆ ಪಾಕಿಸ್ತಾನವೇ ಕಾರಣವಾಗಿದ್ದು ಪಾಕಿಸ್ತಾನವೇ ತಾಲಿಬಾನ್​​ನ ಸೃಷ್ಟಿಕರ್ತ ರಾಷ್ಟ್ರವಾಗಿದೆ ಎಂದು ಎಎನ್​ಐಗೆ ಸಂಜಯ್​ ರಾವತ್ ತಿಳಿಸಿದ್ದಾರೆ. ತಾಲಿಬಾನ್ ಸಹಾಯದಿಂದ ಪಾಕಿಸ್ತಾನ ಹರಡಿದ ಭಯೋತ್ಪಾದನೆಯ ಪರಿಣಾಮವನ್ನು ಇಡೀ ಜಗತ್ತು ಅನುಭವಿಸಬೇಕಾಗಿದೆ, ಇಮ್ರಾನ್ ಖಾನ್ ಅವರನ್ನು ನಂಬಲು ಸಾಧ್ಯವಿಲ್ಲ ಎಂದು ರಾವತ್ ಆರೋಪಿಸಿದ್ದಾರೆ.ಜಮ್ಮು ಮತ್ತು ಕಾಶ್ಮೀರ ಭಾರತದ ಭಾಗವಾಗಿದೆ. ಇದು ಇಡೀ ದೇಶದ ಜನರ ಭಾವನೆ ಎಂದು ರಾವತ್ ಹೇಳಿದ್ದಾರೆ. ‘ಆರ್​ಎಸ್​ಎಸ್​ ಐಡಿಯಾಲಜಿ’ ಬಗ್ಗೆ ಪಾಕ್ ಪ್ರಧಾನಿ ಟೀಕಿಸುವುದು ಸರಿಯಲ್ಲ ಸಂಜಯ್ ರಾವತ್​​ ಹೇಳಿದ್ದಾರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದಾಗಿ (ಆರ್‌ಎಸ್‌ಎಸ್) ಭಾರತದೊಂದಿಗೆ ಗಡಿ ವಿವಾದ ಮತ್ತು ಭಯೋತ್ಪಾದನೆ ವಿಚಾರವಾಗಿ ಮಾತುಕತೆ ಸ್ಥಗಿತಗೊಂಡಿದೆ ಎಂದಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ರಾಜ್ಯಸಭಾ ಸದಸ್ಯ ಮತ್ತು ಶಿವಸೇನೆ ಮುಖಂಡ ಸಂಜಯ್ ರಾವತ್​​ ವಾಗ್ದಾಳಿ ನಡೆಸಿದ್ದಾರೆ
.ಕಳೆದ ಕೆಲವು ವಾರಗಳಿಂದ, ಅಫ್ಘಾನಿಸ್ತಾನದಲ್ಲಿ ಹಿಂಸಾಚಾರ ಉಲ್ಬಣವಾಗಿದೆ. ತಾಲಿಬಾನ್ ಮತ್ತು ಅಫ್ಘಾನ್ ಭದ್ರತಾ ಪಡೆಗಳ ವಿರುದ್ಧ ಸಂಘರ್ಷದಲ್ಲಿ ಸಾಕಷ್ಟು ಮಂದಿ ಸಾವನ್ನಪ್ಪಿದ್ದಾರೆ. ಆಫ್ಘನ್​ನ ಬಹುಪಾಲು ಪ್ರದೇಶದವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿರುವುದಾಗಿ ತಾಲಿಬಾನಿಗಳು ಘೋಷಿಸಿದ್ದಾರೆ. ಶುಕ್ರವಾರಷ್ಟೇ ತಾಷ್ಕೆಂಟ್​​ನಲ್ಲಿ ಮಾತನಾಡಿದ್ದ ಇಮ್ರಾನ್ ಖಾನ್ ಭಾರತದೊಂದಿಗೆ ಮಾತುಕತೆ ಸ್ಥಗಿತವಾಗಲು ಆರ್​ಎಸ್​ಎಸ್​ ಕಾರಣ ಎಂದಿದ್ದರು ಮಾತ್ರವಲ್ಲದೇ ಪಾಕ್ ತಾಲಿಬಾನಿಗಳನ್ನು ನಿಯಂತ್ರಿಸುತ್ತಿದೆಯೇ ಎಂದು ಎಎನ್​ಐ ಕೇಳಿದ್ದ ಪ್ರಶ್ನೆಗೆ ಉತ್ತರ ನೀಡದೇ ನುಣುಚಿಕೊಂಡಿದ್ದರು. ಇದೇ ವಿಚಾರವಾಗಿ ರಾವತ್ ಇಮ್ರಾನ್ ವಿರುದ್ಧ ಹರಿಹಾಯ್ದಿದ್ದಾರೆ.

Indresh KC

Recent Posts

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

3 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

22 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

38 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

1 hour ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

1 hour ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

1 hour ago