News Karnataka Kannada
Tuesday, April 30 2024
ವಿದೇಶ

ತಾಲಿಬಾನ್ : ಅಪರಿಚಿತ ಮಿಲಿಟರಿ ವಿಮಾನಗಳ ದಾಳಿ, ಹಲವು ಉಗ್ರರು ಬಲಿ

Taliban
Photo Credit :

ಪಂಜ್ಶೀರ್ :  ಪಂಜ್ಶೀರ್ ಪ್ರಾಂತ್ಯದಲ್ಲಿರುವ ತಾಲಿಬಾನ್ ಪಡೆಗಳ ಮೇಲೆ ಅಪರಿಚಿತ ಮಿಲಿಟರಿ ವಿಮಾನಗಳು ದಾಳಿ ನಡೆಸಿದೆ ಎಂದು ವರದಿ ತಿಳಿಸಿದೆ. ಅಫ್ಘಾನಿಸ್ಥಾನವನ್ನು ಸಂಪೂರ್ಣ ತನ್ನ ವಶಕ್ಕೆ ಪಡೆದ ನಂತರ ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಹಲವು ಉಗ್ರರು ಮೃತಪಟ್ಟಿರುವ ಬಗ್ಗೆ ಸ್ಥಳೀಯ ಮಾಧ್ಯಮಗಳು ವರದಿಯಾಗಿದೆ.

ಪಂಜ್ಶೀರ್ ಪ್ರಾಂತ್ಯವನ್ನು ವಶಪಡಿಸಿಕೊಂಡ ಬಳಿಕ ಅಲ್ಲಿನ ಗವರ್ನರ್ ಕಚೇರಿಯಲ್ಲಿ ತಾಲಿಬಾನ್ ಹೋರಾಟಗಾರರು ಧ್ವಜ ಹಾರಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಪಂಜ್ಶೀರ್ ನ ಪ್ರತಿರೋಧ ಪಡೆಗಳು 700ಕ್ಕೂ ಹೆಚ್ಚು ತಾಲಿಬಾನಿಗಳನ್ನು ಹೊಡೆದುರುಳಿಸಿದ್ದು, 1000ಕ್ಕೂ ಹೆಚ್ಚು ಉಗ್ರರರನ್ನು ಬಂಧಿಸಿತ್ತು. ಈ ನಡುವೆ ಅಲ್ಲಿನ ಸಂಪೂರ್ಣ ಪ್ರಾಂತ್ಯವನ್ನು ತಾಲಿಬಾನ್ ತನ್ನ ತೆಕ್ಕೆಗೆ ತೆಗೆದುಕೊಂಡಿರುವುದಾಗಿ ಘೋಷಿಸಿತು.

ಆದರೆ ತಾಲಿಬಾನಿಗಳ ಈ ಹೇಳಿಕೆಯನ್ನು ತಳ್ಳಿಹಾಕಿದ ಪ್ರತಿರೋಧ ಪಡೆ, ನಮ್ಮ ಭೂಮಿಯನ್ನು ಉಳಿಸಿಕೊಳ್ಳಲು ನಮ್ಮ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ. ತಾಲಿಬಾನಿಗಳ ಕ್ರೌರ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಲ್ಲಿನ ಮಹಿಳೆಯ ಸ್ಥಿತಿ ಶೋಚನೀಯವಾಗಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು