News Karnataka Kannada
Monday, May 13 2024
ವಿದೇಶ

ದೇಶದಲ್ಲಿ 24 ನಕಲಿ ವಿಶ್ವವಿದ್ಯಾನಿಲಯಗಳು ಪತ್ತೆ: ಯುಜಿಸಿ

Photo Credit :

ದೇಶದಲ್ಲಿ 24 ನಕಲಿ ವಿಶ್ವವಿದ್ಯಾನಿಲಯಗಳು ಪತ್ತೆ: ಯುಜಿಸಿ

ನವದೆಹಲಿ:  ದೇಶದಲ್ಲಿ 24 ನಕಲಿ ವಿವಿಗಳ ಪಟ್ಟಿಯನ್ನು ಪ್ರಕಟಿಸಿದ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ). ಪಟ್ಟಿಯಲ್ಲಿ ಪ್ರಕಟಿಸಿರುವ ವಿಶ್ವವಿದ್ಯಾಲಯಗಳ ಹೆಸರುಗಳಲ್ಲಿ ಗರಿಷ್ಠ ಉತ್ತರ ಪ್ರದೇಶ ಹಾಗೂ ದೆಹಲಿಯಿಂದ ಕಾರ್ಯನಿರ್ವಹಿಸುತ್ತಿದೆ ಎನ್ನಲಾಗುತ್ತಿದೆ.

24 ವಿಶ್ವವಿದ್ಯಾಲಯಗಳಲ್ಲಿ ಬಹುಪಾಲು ಅಂದರೆ 8 ನಕಲಿ ವಿವಿಗಳ ಸುಳಿವು ಉತ್ತರ ಪ್ರದೇಶದಲ್ಲಿ ದೊರಕಿದೆ. ದೆಹಲಿಯಲ್ಲಿ 7, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 2 ಹಾಗೂ ಕೇರಳ, ಕರ್ನಾಟಕ, ಪಾಂಡಿಚೇರಿ, ಮಹಾರಾಷ್ಟ್ರಗಳಲ್ಲಿ ತಲಾ ಒಂದು ನಕಲಿ ವಿಶ್ವವಿದ್ಯಾಲಯಗಳು ಇರುವುದು ಸಾಬೀತಾಗಿದೆ.

“ಯುಜಿಸಿ ಕಾಯ್ದೆ 1956 ಅಡಿ ಪದವಿ ನೀಡುವ ಹಕ್ಕನ್ನು ನೀಡಲಾಗಿತ್ತು. ಆ ಹಕ್ಕಿನ ಪ್ರಕಾರ ಕೇಂದ್ರ, ರಾಜ್ಯ, ಪ್ರಾಂತೀಯ ಕಾಯಿದೆಯಡಿ ಸ್ಥಾಪಿಸಲಾದ ವಿಶ್ವವಿದ್ಯಾನಿಲಯ ಅಥವಾ ಪದವಿಯನ್ನು ನೀಡಲು ಸಂಸತ್ತಿನ ಕಾಯಿದೆಯಿಂದ ವಿಶೇಷವಾಗಿ ಅಧಿಕಾರ ಹೊಂದಿರುವ ಸಂಸ್ಥೆಯಿಂದ ಮಾತ್ರ ಪದವಿಗಳನ್ನು ನೀಡಲು ಅವಕಾಶವಿದೆ” ಎಂದು ಜೈನ್ ಯುಜಿಸಿ ಕಾರ್ಯದರ್ಶಿ ರಜನೀಶ್ ತಿಳಿಸಿದರು.

ನಂತರ ಮಾತನಾಡಿದ ಜೈನ್, “ಯುಜಿಸಿ ಕಾಯ್ದೆಗೆ ವಿರುದ್ಧವಾಗಿ ಪ್ರಸ್ತುತ 24 ನಕಲಿ ವಿಶ್ವವಿದ್ಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಈ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಿಳಿಸಲಾಗಿದ್ದು, ಅವುಗಳನ್ನು ನಕಲಿ ವಿಶ್ವವಿದ್ಯಾಲಯಗಳೆಂದು ಘೋಷಿಸಲಾಗಿದೆ. ಆದ್ದರಿಂದ ಆ ವಿಶ್ವವಿದ್ಯಾಲಯಗಳಿಗೆ ಯಾವುದೇ ಪದವಿ ನೀಡಲು ಅಧಿಕಾರವಿಲ್ಲ” ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ 8 ನಕಲಿ ವಿಶ್ವವಿದ್ಯಾನಿಲಯಗಳ ಹೆಸರುಗಳು- ವಾರಣೇಶ್ಯ ಸಂಸ್ಕೃತ ವಿಶ್ವವಿದ್ಯಾಲಯ- ವಾರಣಾಸಿ, ಮಹಿಲ ಗ್ರಾಮ ವಿದ್ಯಾಪೀಠ್- ಅಲಹಾಬಾದ್, ಗಾಂಧಿ ಹಿಂದಿ ವಿದ್ಯಾಪೀಠ್- ಅಲಹಾಬಾದ್, ನ್ಯಾಷನಲ್ ಯೂನಿವರ್ಸಿಟಿ ಆಫ್ ಎಲೆಕ್ಟ್ರೋ ಕಾಂಪ್ಲೆಕ್ಸ್ ಹೋಮಿಯೋಪತಿ- ಕಾನ್ಪುರ, ನೇತಾಜಿ ಸುಭಾಷ್ ಚಂದ್ರ ಬೋಸ್ ಓಪನ್ ಯೂನಿವರ್ಸಿಟಿ- ಅಲಿಗಡ, ಉತ್ತರ ಪ್ರದೇಶ ವಿಶ್ವವಿದ್ಯಾಲಯ- ಮಥುರಾ, ಮಹಾರಾಣಾ ಪ್ರತಾಪ್ ಶಿಕ್ಷ ನಿಕೇತನ್ ವಿಶ್ವವಿದ್ಯಾಲಯ- ಪ್ರತಾಪಗಡ ಮತ್ತು ಇಂದ್ರಪ್ರಸ್ಥ ಶಿಕ್ಷಾ ಪರಿಷತ್- ನೋಯ್ಡಾ.

 

ದೆಹಲಿಯ 7 ನಕಲಿ ವಿಶ್ವವಿದ್ಯಾನಿಲಯಗಳ ಪಟ್ಟಿ: ಕಮರ್ಷಿಯಲ್ ಯೂನಿವರ್ಸಿಟಿ ಲಿಮಿಟೆಡ್, ಯುನೈಟೆಡ್ ನೇಷನ್ಸ್ ಯೂನಿವರ್ಸಿಟಿ, ವೊಕೇಶನಲ್ ಯೂನಿವರ್ಸಿಟಿ, ಎಡಿಆರ್ ಕೇಂದ್ರಿತ ನ್ಯಾಯಾಂಗ ವಿಶ್ವವಿದ್ಯಾಲಯ, ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಸಂಸ್ಥೆ, ವಿಶ್ವಕರ್ಮ ಸ್ವಯಂ ಉದ್ಯೋಗಕ್ಕಾಗಿ ಮುಕ್ತ ವಿಶ್ವವಿದ್ಯಾಲಯ ಮತ್ತು ಅಧ್ಯಾತ್ಮಿಕ ವಿಶ್ವವಿದ್ಯಾಲಯ.

ಒಡಿಶಾ ಮತ್ತು ಪಶ್ಚಿಮ ಬಂಗಾಳದ ತಲಾ 2 ನಕಲಿ ವಿಶ್ವವಿದ್ಯಾನಿಲಯಗಳು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್, ಕೋಲ್ಕತಾ; ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಅಂಡ್ ರಿಸರ್ಚ್, ಕೋಲ್ಕತಾ; ನಬಭರತ್ ಶಿಕ್ಷಾ ಪರಿಷತ್, ರೂರ್ಕೆಲಾ ಮತ್ತು ಉತ್ತರ ಒರಿಸ್ಸಾ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ.

ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪುದುಚೇರಿ ಮತ್ತು ಮಹಾರಾಷ್ಟ್ರದ ನಕಲಿ ವಿಶ್ವವಿದ್ಯಾನಿಲಯಗಳು: ಶ್ರೀ ಬೋಧಿ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಪುದುಚೇರಿ; ಕ್ರೈಸ್ಟ್ ನ್ಯೂ ಟೆಸ್ಟಮೆಂಟ್ ಡೀಮ್ಡ್ ಯೂನಿವರ್ಸಿಟಿ, ಆಂಧ್ರಪ್ರದೇಶ; ರಾಜಾ ಅರೇಬಿಕ್ ವಿಶ್ವವಿದ್ಯಾಲಯ, ನಾಗ್ಪುರ; ಕೇರಳದ ಸೇಂಟ್ ಜಾನ್ಸ್ ವಿಶ್ವವಿದ್ಯಾಲಯ ಮತ್ತು ಕರ್ನಾಟಕದ ಬಡಗನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಶನ್ ಸೊಸೈಟಿ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು