ನವದೆಹಲಿ: ದೇಶದಲ್ಲಿ ಕಳೆದ ಮೂರು ದಿನಗಳಿಂದ ದಾಖಲೆಯ ಪ್ರಮಾಣದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದೆ.
ಸೆ.19ರಿಂದ ಸೋಮವಾರದವರೆಗೆ ಪ್ರತಿದಿನ 90 ಸಾವಿರಕ್ಕೂ ಅಧಿಕ ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದು ದೇಶದಲ್ಲಿ ದಾಖಲೆಯ ಪ್ರಮಾಣದಲ್ಲಿ ದಾಖಲಾದ ಗುಣಮುಖರ ಸಂಖ್ಯೆಯಾಗಿದೆ. ಗುಣಮುಖರಾದವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ದೇಶದಲ್ಲಿ ಇದುವರೆಗೆ 54,87,581 ಕೊರೊನಾ ಸೋಂಕು ಪ್ರಕರಣ ದಾಖಲಾಗಿದ್ದು, ಪ್ರಸ್ತುತ 10,03,299 ಮಂದಿ ಸೋಂಕಿತರಿದ್ದು, 43,96,399 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.