ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 67,151 ಕೊರೋನಾ ಸೋಂಕಿತರು ಪತ್ತೆಯಾಗಿದ್ದು, 1059 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯು ಮಾಹಿತಿ ನೀಡಿದೆ.
ದೇಶದಲ್ಲಿ ಈಗ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆಯು 32 ಲಕ್ಷದ ಗಡಿ ದಾಟಿದೆ. ಸಾವಿನ ಸಂಖ್ಯೆಯು 59,449ಕ್ಕೆ ಏರಿಕೆ ಆಗಿದೆ.
ಕಳೆದ 24 ಗಂಟೆಗಳಲ್ಲಿ ಒಟ್ಟು 63,173 ಮಂದಿ ಸೋಂಕಿತರು ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆಯು 24,67,758ಕ್ಕೆ ಏರಿಕೆ ಆಗಿದೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಗುಣಮುಖರಾಗುವವರ ಪ್ರಮಾಣವು ಶೇ.76.29ಕ್ಕೆ ಏರಿಕೆ ಆಗಿದೆ ಎಂದು ಆರೋಗ್ಯ ಇಲಾಖೆಯು ಮಾಹಿತಿ ನೀಡಿದೆ.