ನವದೆಹಲಿ: ಮುಸ್ಲಿಮರ ಪವಿತ್ರ ಹಬ್ಬವಾಗಿರುವ ರಂಜಾನ್ ದೇಶದಾದ್ಯಂತ ಬುಧವಾರ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ದೇಶದ ಕೆಲವೊಂದು ಪುರಾತನ ಮಸೀದಿಗಳಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ಮಾಡುವ ಮೂಲಕ ರಂಜಾನ್ ಹಬ್ಬವನ್ನು ಆಚರಣೆ ಮಾಡಲಾಯಿತು.
ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಉರ್ದುವಿನಲ್ಲಿ ಶುಭಾಶಯ ಕೋರಿದರು. ರಾಷ್ಟ್ರಪತಿ ರಾಮನಾಥ್ ಕೋವಿಂಗ್ ಅವರು ಕೂಡ ಶುಭ ಕೋರಿದರು.