News Karnataka Kannada
Sunday, May 19 2024
ವಿದೇಶ

ದೇಶದ ಹಲವು ರಾಜ್ಯದಲ್ಲಿ 6-8 ವಾರಗಳ ಲಾಕ್ ಡೌನ್ ಅಗತ್ಯವಿದೆ: ಐಸಿಎಂಆರ್ ಮುಖ್ಯಸ್ಥ

Photo Credit :

ದೇಶದ ಹಲವು ರಾಜ್ಯದಲ್ಲಿ 6-8 ವಾರಗಳ ಲಾಕ್ ಡೌನ್ ಅಗತ್ಯವಿದೆ: ಐಸಿಎಂಆರ್ ಮುಖ್ಯಸ್ಥ

ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಿರುವ ಜಿಲ್ಲೆಗಳಲ್ಲಿ 6ರಿಂದ 8 ವಾರಗಳ ಕಾಲ ಲಾಕ್‌ಡೌನ್ ಘೋಷಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮುಖ್ಯಸ್ಥ ಡಾ. ಬಲರಾಮ ಭಾರ್ಗವ ಹೇಳಿದ್ದಾರೆ.

 

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ಒಳಗಾದವರಲ್ಲಿ ಶೇ 10ಕ್ಕಿಂತಲೂ ಹೆಚ್ಚು ಮಂದಿಯಲ್ಲಿ ಸೋಂಕು ದೃಢಪಡುತ್ತಿರುವುದು ಯಾವ ಜಿಲ್ಲೆಯಲ್ಲಿ ಕಂಡುಬರುತ್ತಿದೆಯೋ ಅಲ್ಲಿ ಲಾಕ್‌ಡೌನ್ ಅಗತ್ಯವಿದೆ ಎಂದು ಹೇಳಿದ್ದಾರೆ.

 

ಇದರೊಂದಿಗೆ, ಈಗಾಗಲೇ ದೇಶದ ಹಲವು ಕಡೆಗಳಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ಇನ್ನಷ್ಟು ಸಮಯದ ವರೆಗೆ ಮಂದುವರಿಯಬೇಕಾಗಬಹುದು ಎಂದು ಸರ್ಕಾರಿ ಅಧೀನದ ಸಂಸ್ಥೆಯೊಂದರ ಹಿರಿಯ ಅಧಿಕಾರಿಯೊಬ್ಬರು ಮೊದಲ ಬಾರಿಗೆ ಬಹಿರಂಗವಾಗಿ ಹೇಳಿದಂತಾಗಿದೆ.

 

ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳನ್ನು ಸಂಪೂರ್ಣ ಬಂದ್ ಮಾಡಬೇಕು. ಪಾಸಿಟಿವಿಟಿ ದರ ಶೇ 5ರಿಂದ 10ರ ಒಳಗೆ ಇದ್ದರೆ ಅಂತಹ ಜಿಲ್ಲೆಗಳಲ್ಲಿ ಚಟುವಟಿಕೆಗಳಿಗೆ ಅವಕಾಶ ನೀಡಬಹುದು. ಆದರೆ, ಸೊಂಕು ಪತ್ತೆ ಪ್ರಮಾಣ ಈ ಪ್ರಮಾಣಕ್ಕೆ ಇಳಿಯಬೇಕು. ಇದು ಆರರಿಂದ ಎಂಟು ವಾರಗಳ ವರೆಗೆ ಸಾಧ್ಯವಿಲ್ಲ’ ಎಂದು ಬಲರಾಮ ಭಾರ್ಗವ ಹೇಳಿದ್ದಾರೆ.

 

ಪ್ರಸ್ತುತ ದೇಶದ 718 ಜಿಲ್ಲೆಗಳ ಪೈಕಿ ನಾಲ್ಕನೇ ಮೂರರಷ್ಟು ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 10ಕ್ಕಿಂತ ಹೆಚ್ಚಿದೆ. ಇದರಲ್ಲಿ ಮಹಾನಗರಗಳಾದ ದೆಹಲಿ, ಮುಂಬೈ ಹಾಗೂ ಬೆಂಗಳೂರು ಸಹ ಸೇರಿವೆ.

 

ಆರ್ಥಿಕತೆಗೆ ಹೊಡೆತ ಬೀಳುವ ಕಾರಣಕ್ಕಾಗಿ ದೇಶವ್ಯಾಪಿ ಲಾಕ್‌ಡೌನ್ ಮಾಡುವುದಿಲ್ಲ ಎಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಲಾಕ್‌ಡೌನ್ ನಿರ್ಧಾರವನ್ನು ಆಯಾ ರಾಜ್ಯ ಸರ್ಕಾರಗಳಿಗೆ ಬಿಟ್ಟಿದೆ.

 

ಸೋಂಕು ಹರಡುವುದನ್ನು ತಡೆಯಲು ಹಲವಾರು ರಾಜ್ಯಗಳು ಈಗಾಗಲೇ ಆರ್ಥಿಕ ಚಟುವಟಿಕೆ ಮತ್ತು ಸಾರ್ವಜನಿಕ ಸಂಚಾರದ ಮೇಲೆ ವಿವಿಧ ಹಂತದ ನಿರ್ಬಂಧಗಳನ್ನು ವಿಧಿಸಿವೆ. ವಾರಕ್ಕೊಮ್ಮೆ ಅಥವಾ ಹದಿನೈದು ದಿನಗಳಿಗೊಮ್ಮೆ ಪರಿಸ್ಥಿತಿ ಅವಲೋಕಿಸಿ ಈ ನಿರ್ಧಾರಗಳನ್ನು ಪುನರ್‌ ಪರಿಶೀಲಿಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು